Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಬೆಂಗಳೂರಲ್ಲಿ ಹಾರ್ಟ್ ಅಟ್ಯಾಕ್ ನಿಂದ ಯುವಕ ಸಾವು

09/07/2025 4:51 PM

PM ಕಿಸಾನ್ ಸಮ್ಮಾನ್ ನಿಧಿ ಯೋಜನೆ: ರೈತರು ಈ ನಿಯಮಗಳ ಪಾಲನೆ ಕಡ್ಡಾಯ | PM Kisan Samman Nidhi Yojana

09/07/2025 4:46 PM

Viral Video : ಬ್ರೆಸಿಲಿಯಾದಲ್ಲಿ ‘ಪ್ರಧಾನಿ ಮೋದಿ’ಗೆ 144 ಕುದುರೆ ಒಳಗೊಂಡ ಭವ್ಯ ಸ್ವಾಗತ, ಮೊಳಗಿದ ಭಾರತೀಯ ಸಂಗೀತ

09/07/2025 4:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮ ಪಕ್ಷದ ಕಡೆ ಬೊಟ್ಟು ಮಾಡುವುದನ್ನು ನಿಲ್ಲಿಸಿ, ನಿಮ್ಮ ಪಕ್ಷದ್ದು ನೋಡ್ಕೊಳಿ : ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
KARNATAKA

ನಮ್ಮ ಪಕ್ಷದ ಕಡೆ ಬೊಟ್ಟು ಮಾಡುವುದನ್ನು ನಿಲ್ಲಿಸಿ, ನಿಮ್ಮ ಪಕ್ಷದ್ದು ನೋಡ್ಕೊಳಿ : ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

By kannadanewsnow0526/09/2024 6:58 PM

ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದು ಇಡೀ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಗುರುತು ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದ ಕಾಂಗ್ರೆಸ್ ಪಕ್ಷದಲ್ಲಿ ಅಂತಕಲಹ ನಡೆಯುತ್ತಿದೆ ಎಂಬ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಸಿದ್ದರಾಮಯ್ಯ ಅವರು,ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಕಾಂಗ್ರೆಸ್ ನಲ್ಲಿ ಅಂತಃಕಲಹ ನಡೆಯುತ್ತಿದೆ ಎಂದು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ. ಬಹುಶಃ ಪ್ರಧಾನಿಯವರು ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳಲ್ಲಿ ಉಲ್ಲೇಖಗೊಳ್ಳುತ್ತಲಿರುವ ಪಕ್ಷಗಳ ಹೆಸರಲ್ಲಿ ಗೊಂದಲ ಮಾಡಿಕೊಂಡು, ಬಿಜೆಪಿ ಬದಲಿಗೆ ಕಾಂಗ್ರೆಸ್ ಎಂದು ತಿಳಿದುಕೊಂಡು ಈ ಅಭಿಪ್ರಾಯ ವ್ಯಕ್ತಪಡಿಸಿರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ.

ಬಿಜೆಪಿಯ ರಕ್ತದಲ್ಲಿ ಹೇಗೆ ಕೋಮುವಾದ ಸೇರಿಕೊಂಡಿದೆಯೋ, ಅದೇ ರೀತಿ ಅಂತರ್‌ಕಲಹವೂ ಸೇರಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದ @BJP4Karnataka ನಾಯಕರು ಪರಸ್ಪರ ಕೆಸರೆರಚಾಟ ಮಾಡಿಕೊಳ್ಳದ ದಿನವೇ ಸಿಗಲಾರದು. ಪ್ರತಿನಿತ್ಯ ಬಿಜೆಪಿ ನಾಯಕರು ಆರೋಪ – ಪ್ರತ್ಯಾರೋಪ, ಪರಸ್ಪರ ದೂಷಣೆ – ನಿಂದನೆಯ ಧಾರವಾಹಿ ಮೂಲಕ ಜನರನ್ನು ರಂಜಿಸುತ್ತಿದ್ದಾರೆ.

ಸನ್ಮಾನ್ಯ @narendramodi ಅವರೇ, ದಯವಿಟ್ಟು ಬೆಳಿಗ್ಗೆ ಎದ್ದು ಕರ್ನಾಟಕದಿಂದ ಪ್ರಕಟವಾಗುವ ಪತ್ರಿಕೆಗಳ ಮೇಲೆ ಕಣ್ಣಾಡಿಸಿದರೆ ನಿಮ್ಮ ಪಕ್ಷದಲ್ಲಿ ನಡೆಯುವ ಅಂತರ್‌ಕಲಹದ ಒಂದು ಅಂದಾಜು ಸಿಗಬಹುದು. ಇದರ ನಂತರವಾದರೂ ನೀವು ನಮ್ಮ ಪಕ್ಷದ ಕಡೆ ಬೊಟ್ಟು ಮಾಡುವುದನ್ನು ನಿಲ್ಲಿಸಿ, ನಿಮ್ಮ ಪಕ್ಷದ ಅಂತರ್‌ಕಲಹದ ಬೆಂಕಿಯನ್ನು ಶಮನ ಮಾಡಲು ಪ್ರಯತ್ನ ನಡೆಸಬಹುದು.

ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬೆಳಿಗ್ಗೆ ಎದ್ದ ಕೂಡಲೇ @BSYBJP ಮತ್ತು ಅವರ ಮಕ್ಕಳ ವಿರುದ್ಧ ಸಾವಿರಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ. ಇವರ ಆರೋಪಗಳಿಗೆ ಶಾಸಕರಾದ ರಮೇಶ್ ಜಾರಕಿಹೊಳಿ, ಸಿ.ಟಿ.ರವಿ ಮೊದಲಾದವರು ದನಿಗೂಡಿಸಿ ಅಪ್ಪ-ಮಕ್ಕಳ ವಿರುದ್ಧ ಬಗೆಬಗೆಯ ಆರೋಪಗಳನ್ನು ಮಾಡಿದ್ದಾರೆ. ಇದೀಗ ಉಚ್ಚಾಟಿತ @BJP4Karnataka ನಾಯಕ ಈಶ್ವರಪ್ಪನವರ ಮನೆಯಲ್ಲಿಯೇ ಕೂತು ಭಿನ್ನಮತೀಯ ಶಾಸಕರು ಸಭೆ ನಡೆಸಿದ್ದಾರೆ. ಇದನ್ನು ಅಂತರ್‌ಕಲಹ ಎಂದು ಕರೆಯದೆ ಪ್ರೇಮಸಲ್ಲಾಪ ಎನ್ನೋಣವೇ?

ಕರ್ನಾಟಕದ ಬಿಜೆಪಿಯಲ್ಲಿನ ಅಂತರ್‌ಕಲಹ ಇತ್ತೀಚಿನ ಬೆಳವಣಿಗೆಯೇನಲ್ಲ, ಇದಕ್ಕೊಂದು ಇತಿಹಾಸವಿದೆ…
ಕರ್ನಾಟಕದ ಜನತೆ ಎಂದೂ ಬಿಜೆಪಿಗೆ ಪೂರ್ಣಬಹುಮತ ನೀಡಿ ಅಧಿಕಾರಕ್ಕೆ ತಂದಿಲ್ಲ. ಅಕ್ರಮ ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದರೂ ಯಾರೇ ಒಬ್ಬ ಮುಖ್ಯಮಂತ್ರಿ ಪೂರ್ಣಾವಧಿ ಆಳಿಲ್ಲ. 2008 ರಿಂದ 2013ರ ವರೆಗೆ ಮೂವರು ಮುಖ್ಯಮಂತ್ರಿಗಳು, 2019ರಿಂದ 2023ರ ಅವಧಿಯಲ್ಲಿ ಇಬ್ಬರು ಮುಖ್ಯಮಂತ್ರಿಗಳು. ಕರ್ನಾಟಕದ ಬಿಜೆಪಿಯೊಳಗಿನ ಅಂತರಕಲಹ ನಮ್ಮಲ್ಲಿ ಮನೆಮನೆಮಾತಾಗಿದೆ. ಇದರಲ್ಲಿ ನಮ್ಮ ಪಕ್ಷದ ಯಾವುದೇ ಪಾತ್ರ ಇಲ್ಲ. ಇವೆಲ್ಲ ಸ್ವಯಂಕೃತ ಅಪರಾಧದ ಹಳವಂಡಗಳು.

2011ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಜೈಲಿಗೆ ಹೋಗಲು ಪಕ್ಷದೊಳಗಿನ ಅಂತರ್‌ಕಲಹವೂ ಕಾರಣ ಎನ್ನುವುದನ್ನು ಪ್ರಧಾನಿ @narendramodi ಅವರೂ ಮರೆತುಬಿಟ್ಟಿದ್ದಾರೆ. ಅದರ ನಂತರ @BJP4Karnataka ತೊರೆದು ಸ್ವಂತ ಪಕ್ಷ ಕಟ್ಟಿದ್ದ ಯಡಿಯೂರಪ್ಪನವರು ವಾಜಪೇಯಿ – ಅಡ್ವಾಣಿಯವರನ್ನು ಸೇರಿದಂತೆ ಯಾರನ್ನೂ ಬಿಡದೆ ಕೀಳು ಮಟ್ಟದ ಭಾಷೆಯಲ್ಲಿ ನಿಂದಿಸಿದ್ದಾರೆ. ಕೊನೆಗೆ ಅವರನ್ನೇ ಕರೆತಂದು ಮುಖ್ಯಮಂತ್ರಿ ಮಾಡಿದ್ದಾಯಿತು, ನಂತರ ಅವರನ್ನು ಪದಚ್ಯುತಿಗೊಳಿಸಿಯೂ ಆಯಿತು. ಇವೆಲ್ಲದರ ಹಿಂದೆ ಪಕ್ಷದ ಅಂತರ್‌ಕಲಹ ಕಾರಣ ಅಲ್ಲವೇ?

ಪ್ರಧಾನಿ ನರೇಂದ್ರ ಮೋದಿ ಅವರೇ, ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯಲು ಹೋಗಬೇಡಿ. ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಚಿಂತೆ ಮಾಡಬೇಡಿ. ನಮ್ಮ ಪಕ್ಷ ಅಧಿಕಾರಕ್ಕೆ ಬಂದಾಗೆಲ್ಲ ಪೂರ್ಣಾವಧಿಯನ್ನು ಮುಗಿಸಿದ್ದೇವೆ. ದೇವರಾಜ ಅರಸು ನಂತರ ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ನಾನು ಇದೀಗ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಮ್ಮೊಳಗೆ ಜಗಳ ಹುಟ್ಟುಹಾಕುವ ನಿಮ್ಮೆಲ್ಲರ ನಿರಂತರ ಪ್ರಯತ್ನದ ಹೊರತಾಗಿಯೂ ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

2011ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಜೈಲಿಗೆ ಹೋಗಲು ಪಕ್ಷದೊಳಗಿನ ಅಂತರ್‌ಕಲಹವೂ ಕಾರಣ ಎನ್ನುವುದನ್ನು ಪ್ರಧಾನಿ @narendramodi ಅವರೂ ಮರೆತುಬಿಟ್ಟಿದ್ದಾರೆ. ಅದರ ನಂತರ @BJP4Karnataka ತೊರೆದು ಸ್ವಂತ ಪಕ್ಷ ಕಟ್ಟಿದ್ದ ಯಡಿಯೂರಪ್ಪನವರು ವಾಜಪೇಯಿ – ಅಡ್ವಾಣಿಯವರನ್ನು ಸೇರಿದಂತೆ ಯಾರನ್ನೂ ಬಿಡದೆ ಕೀಳು ಮಟ್ಟದ ಭಾಷೆಯಲ್ಲಿ ನಿಂದಿಸಿದ್ದಾರೆ.… pic.twitter.com/qt8rwhOI9L

— Siddaramaiah (@siddaramaiah) September 26, 2024

Share. Facebook Twitter LinkedIn WhatsApp Email

Related Posts

SHOCKING : ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಬೆಂಗಳೂರಲ್ಲಿ ಹಾರ್ಟ್ ಅಟ್ಯಾಕ್ ನಿಂದ ಯುವಕ ಸಾವು

09/07/2025 4:51 PM1 Min Read

BREAKING : ರಾಮನಗರದಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ 14 ವರ್ಷದ ಬಾಲಕಿಯ ಬರ್ಬರ ಹತ್ಯೆ!

09/07/2025 4:30 PM1 Min Read

ಹೀಗಿದೆ ಇಂದಿನ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸುದ್ದಿಗೋಷ್ಠಿಯ ಹೈಲೈಟ್ಸ್

09/07/2025 4:29 PM4 Mins Read
Recent News

SHOCKING : ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಬೆಂಗಳೂರಲ್ಲಿ ಹಾರ್ಟ್ ಅಟ್ಯಾಕ್ ನಿಂದ ಯುವಕ ಸಾವು

09/07/2025 4:51 PM

PM ಕಿಸಾನ್ ಸಮ್ಮಾನ್ ನಿಧಿ ಯೋಜನೆ: ರೈತರು ಈ ನಿಯಮಗಳ ಪಾಲನೆ ಕಡ್ಡಾಯ | PM Kisan Samman Nidhi Yojana

09/07/2025 4:46 PM

Viral Video : ಬ್ರೆಸಿಲಿಯಾದಲ್ಲಿ ‘ಪ್ರಧಾನಿ ಮೋದಿ’ಗೆ 144 ಕುದುರೆ ಒಳಗೊಂಡ ಭವ್ಯ ಸ್ವಾಗತ, ಮೊಳಗಿದ ಭಾರತೀಯ ಸಂಗೀತ

09/07/2025 4:46 PM

ನವದೆಹಲಿಯಲ್ಲಿ MSTC ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

09/07/2025 4:35 PM
State News
KARNATAKA

SHOCKING : ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಬೆಂಗಳೂರಲ್ಲಿ ಹಾರ್ಟ್ ಅಟ್ಯಾಕ್ ನಿಂದ ಯುವಕ ಸಾವು

By kannadanewsnow0509/07/2025 4:51 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತ ಮರಣ ಮೃದಂಗ ಮುಂದುವರೆದಿದ್ದು, ಇಂದು ಒಂದೇ ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಆರು…

BREAKING : ರಾಮನಗರದಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ 14 ವರ್ಷದ ಬಾಲಕಿಯ ಬರ್ಬರ ಹತ್ಯೆ!

09/07/2025 4:30 PM

ಹೀಗಿದೆ ಇಂದಿನ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸುದ್ದಿಗೋಷ್ಠಿಯ ಹೈಲೈಟ್ಸ್

09/07/2025 4:29 PM

ಮನೆಯಲ್ಲಿ ಪ್ರೀತಿಗೆ ನಿರಾಕರಿಸಿದ್ದಕ್ಕೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನ: ಅಪ್ರಾಪ್ತೆ ಸಾವು

09/07/2025 4:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.