ಕಲಬುರಗಿ : ಕಲಬುರಗಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಭೀಮಾ ನದಿಯಲ್ಲಿ ಪುಣ್ಯ ಸ್ನಾನ ಮಾಡಲು ಹೋಗಿ ನದಿಯಲ್ಲಿ ಮುಳುಗಿ ಇಬ್ಬರು ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದ ಭೀಮಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಹೋದ ವೇಳೆ ಇಬ್ಬರು ಭಕ್ತರು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ಭಕ್ತರನ್ನು ಬಾಲಾಜಿ ಡೋಯಿಯೋಜೆ (47) ಮಹೇಶ್ ಡೋಯಿಯೋಜೆ (49) ಎಂದು ಗುರುತಿಸಲಾಗಿದೆ. ದತ್ತಾತ್ರೇಯನ ದರ್ಶನಕ್ಕೆ ಬಂದಿದ್ದ ಭಕ್ತರು ಭೀಮಾ ನದಿಯ ನೀರಿನ ಆಳ ತಿಳಿಯದೇ ಪವಿತ್ರ ಸ್ನಾನ ಮಾಡಲು ಇಳಿದಿದ್ದಾರೆ. ಈ ವೇಳೆ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.