ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸೇರಿದಂತೆ ಒಟ್ಟು ಐದು ಜನರ ವಿರುದ್ಧ FIR ದಾಖಲಾಗಿದೆ. ಇದರ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ಈ ಒಂದು ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಿ ಎಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಹೌದು ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆಯಲ್ಲಿ ನನಗೆ ನಂಬಿಕೆ ಇಲ್ಲ. ಹಾಗಾಗಿ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕೆಂದು ಆಗ್ರಹಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದೇನೆ ಎಂದು ಅವರು ತಿಳಿಸಿದರು.
ಮೇಲಾಧಿಕಾರಿಗಳಿಂದ ಒತ್ತಡ ಬಂದಿದೆ ಹಾಗಾಗಿ ಇದೀಗ fir ಹಾಕಿದ್ದಾರೆ. ನಮ್ಮ ಪ್ರಾಮಾಣಿಕ ಹೋರಾಟಕ್ಕೆ ಈಗ ಮತ್ತೊಂದು ಜಯ ಸಿಕ್ಕಿದೆ. ಹೋರಾಟಕ್ಕೆ ಜಯ ಸಿಗುತ್ತೆ ಎಂಬುದಕ್ಕೆ ಇದೇ ಉದಾಹರಣೆಯಾಗಿದೆ. ಸಾಮಾನ್ಯ ಪ್ರಜೆಯಿಂದ ಸಿಎಂ ವಿರುದ್ಧ ಹೋರಾಟಕ್ಕೆ ಇದೊಂದು ನಿದರ್ಶನವಾಗಿದೆ. ಭ್ರಷ್ಟ ಮುಖ್ಯಮಂತ್ರಿ ಗೆ ಎಂಬುದಕ್ಕೆ ಇದೊಂದು ಉದಾಹರಣೆಯಾಗಿದೆ ಎಂದು ಸ್ನೇಹಮಯಿ ಕೃಷ್ಣ ಮೊದಲ ಪ್ರತಿಕ್ರಿಯೆ ನೀಡಿದರು.