ಬೆಂಗಳೂರು: ಕೇಂದ್ರ ಸರ್ಕಾರ ಸ್ವಾಮ್ಯದ ಸಂಸ್ಥೆಗಳ ಸಿಬ್ಬಂದಿಗಳ ಮೇಲಿನ ಪ್ರಕರಣಗಳನ್ನು ಸಿಬಿಐ ತನಿಖೆಗೆ ತೆಗೆದುಕೊಳ್ಳುವ ಬಗ್ಗೆ ಗುರುವಾರದ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದಕ್ಕೆ ಬೇರೆ ಅರ್ಥ ನೀಡುವ ಅಗತ್ಯ ಇಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯ ಪಟ್ಟಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, “ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಯಾವುದೇ ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡುವ ಬಗ್ಗೆ ತಪ್ಪು ಗ್ರಹಿಕೆ ಆಗಿದೆ. ಅಸಲಿಗೆ ಯಾರೇ ಶಾಸಕ ಸಚಿವ ಅಥವಾ ಖಾಸಗಿ ವ್ಯಕ್ತಿಗಳ ವಿರುದ್ಧ ಸಿಬಿಐ ವಿಚಾರಣೆ ಗೈಗೆತ್ತಿಕೊಳ್ಳಬೇಕು ಎಂದರೆ ಸರ್ಕಾರದ ಅನುಮತಿ ಕಡ್ಡಾಯ ಎಂಬ ನಿಯಮ ಈಗಾಗಲೇ ಇದೆ. ರಾಜ್ಯ ಸರ್ಕಾರದ ಅನುಮತಿ ತೆಗೆದುಕೊಂಡೇ ಸಿಬಿಐ ಅಧಿಕಾರಿಗಳು ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಬೇಕು. ಈ ಸಂಬಂಧ ಸರ್ಕಾರ ಯಾವ ಬದಲಾವಣೆಯನ್ನೂ ಮಾಡಿಲ್ಲ. ಇದೇ ಕಾರಣಕ್ಕೆ ಇಂದು ಸಿಬಿಐ ಯಾವುದೇ ಪ್ರಕರಣ ತನಿಖೆಗೆ ತೆಗೆದುಕೊಳ್ಳಬೇಕು ಎಂದರೆ ಒಂದೋ ರಾಜ್ಯ ಸರ್ಕಾರ ಅನುಮತಿ ನೀಡಬೇಕು. ಇಲ್ಲವೇ ನ್ಯಾಯಾಲಯ ನಿರ್ದೇಶಿಸಬೇಕು ಎಂಬುದು ನಿಯಮ.
ಆದರೆ, 2005 ರಲ್ಲಿ ನಾವು ಒಂದು ವಿನಾಯಿತಿ ನೀಡಿದ್ದೆವು. ಕೆಲವು ಕೇಂದ್ರ ಸರ್ಕಾರ ಸ್ವಾಮ್ಯದ ಸಂಸ್ಥೆಗಳ ಸಿಬ್ಬಂದಿಗಳ ಮೇಲೆ ಕೇಸ್ ತಗೆದುಕೊಳ್ಳಲು ರಾಜ್ಯ ಸರ್ಕಾರ ಸಿಬಿಐ ಗೆ ವಿನಾಯಿತಿ ನೀಡಿತ್ತು. ಈಗ ಆ ವಿನಾಯಿತಿಯನ್ನು ನಮ್ಮ ಸರ್ಕಾರ ಹಿಂಪಡೆದಿದೆ ಅಷ್ಟೆ. ಏಕೆಂದರೆ ಕಾನೂನು ಪ್ರಕಾರ ಆ ಹಕ್ಕು ಇರುವುದು ರಾಜ್ಯ ಪೊಲೀಸರಿಗೆ ಮಾತ್ರ. ಹೀಗಾಗಿ ಈ ನಿರ್ಧಾರ ಯಾವುದೇ ಮಂತ್ರಿ ಅಥವಾ ಮುಖ್ಯಮಂತ್ರಿಗಳಿಗೆ ಸಂಬಂಧಪಟ್ಟ ವಿಚಾರ ಅಲ್ಲ ಎಂದು ಅವರು ಸ್ಪಷ್ಟಪಡಿಸಿದರು.
BREAKING : ಸಿಎಂ ಬಳಿಕ ಖರ್ಗೆ ಕುಟುಂಬಕ್ಕೆ ಸಂಕಷ್ಟ : ‘ಭೂ ಕಬಳಿಕೆ’ ಆರೋಪದಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ!
ರಾಜ್ಯದ ಜನತೆಗೆ ಬಿಗ್ ಶಾಕ್ ; 10 ದಿನಗಳಲ್ಲಿ ‘ಅಡುಗೆ ಎಣ್ಣೆ’ ಬೆಲೆ ಶೇ.20ರಷ್ಟು ಹೆಚ್ಚಳ