Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

IPL 2026: ‘ಆರ್‌ಸಿಬಿಯಿಂದ ಹೊರಗುಳಿಯುವುದು ನನ್ನ ವೈಯಕ್ತಿಕ ನಿರ್ಧಾರವಲ್ಲ’: ಮೌನ ಮುರಿದ ಯಶ್ ದಯಾಲ್

CBSE ಉತ್ತರ ಪತ್ರಿಕೆಗಳ ಮಿಸ್‌ಮ್ಯಾಚ್ ವಿವಾದ: ವಿದ್ಯಾರ್ಥಿಯ ಪರ ಬ್ಯಾಟ್ ಬೀಸಿದ ರಾಹುಲ್ ಗಾಂಧಿ; ಕೇಂದ್ರ ಸರ್ಕಾರದ ವಿರುದ್ಧ ಕಿಡಿ

ಶ್ರೀಮಂತಿಕೆಯ ಸ್ಟೇಟಸ್ ಗಾಗಿ ಕಳ್ಳತನಕ್ಕಿಳಿದ ಪತಿರಾಯ : ಮಂಡ್ಯದಲ್ಲೋಬ್ಬ ಖತರ್ನಾಕ್ ಕಳ್ಳ ಅಂದರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಪ್ರಧಾನಿ ನರೇಂದ್ರ ಮೋದಿ’ಗೆ ಈ ಸವಾಲ್ ಹಾಕಿದ ‘ಮುಖ್ಯಮಂತ್ರಿ ಸಿದ್ಧರಾಮಯ್ಯ’
KARNATAKA

‘ಪ್ರಧಾನಿ ನರೇಂದ್ರ ಮೋದಿ’ಗೆ ಈ ಸವಾಲ್ ಹಾಕಿದ ‘ಮುಖ್ಯಮಂತ್ರಿ ಸಿದ್ಧರಾಮಯ್ಯ’

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ದಲಿತರ ಬಗ್ಗೆ ಕಾಳಜಿ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತನ್ನಿ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ‘ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ’’ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಎಸ್ ಸಿಎಸ್‌ಪಿ/ಟಿಎಸ್ ಪಿ) ಕಾಯ್ದೆಯನ್ನು ಜಾರಿಗೆ ತಂದು, ದಲಿತರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡಿ, ಅದರ ನಂತರ ನಮ್ಮ ದಲಿತ ಕಾಳಜಿಯನ್ನು ಪ್ರಶ್ನಿಸಿ ಎಂದಿದ್ದಾರೆ.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಕಳೆದ ಹತ್ತು ವರ್ಷಗಳಿಂದ ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದರೂ ಒಪ್ಪಿಕೊಳ್ಳದ ನರೇಂದ್ರ ಮೋದಿಯವರು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಕಣ್ಣೀರು ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಹೇಳಿದ್ದಾರೆ.

ಪ್ರಸಕ್ತ ಸಾಲಿನ ನಮ್ಮ ಸರ್ಕಾರದ ಬಜೆಟ್ ಗಾತ್ರ ರೂ.3.71,383 ಕೋಟಿ, ಅದರಲ್ಲಿ ರೂ.39,121 ಕೋಟಿಯನ್ನು ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗೆ ಮೀಸಲಿಟ್ಟಿದ್ದೇವೆ. ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ರೂ.48.21 ಲಕ್ಷ ಕೋಟಿಯಾಗಿದ್ದು, ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ನೀಡಿರುವ ಅನುದಾನ ರೂ.2,90,401 ಕೋಟಿ ಮಾತ್ರ. ಪ್ರಧಾನಿ ನರೇಂದ್ರ ಮೋದಿ ಅವರೇ, ಇದು ನಿಮ್ಮ ಸರ್ಕಾರದ ದಲಿತ ಕಾಳಜಿ.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಗಿಂತ ಮೊದಲು ರಾಜ್ಯದಲ್ಲಿ ದಲಿತ ಸಮುದಾಯದ ಕಲ್ಯಾಣಕ್ಕಾಗಿಯೇ ಜಾರಿಯಲ್ಲಿದ್ದ ವಿಶೇಷ ಘಟಕ ಯೋಜನೆಯನ್ವಯ 2013-14ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ ರೂ.8,616 ಕೋಟಿಯಾಗಿದ್ದರೆ, ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಯಾದ ವರ್ಷ (2014-2015)ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ ರೂ.15,894 ಕೋಟಿ. ಈ ಮೊತ್ತ ಈಗ ಹೆಚ್ಚು ಕಡಿಮೆ 40,000 ಕೋಟಿ ರೂಪಾಯಿಗೆ ತಲುಪಿದೆ. ಇದು ನಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಇರುವ ದಲಿತರ ಬಗೆಗಿನ ಕಾಳಜಿ.

ಇಷ್ಟು ಮಾತ್ರವಲ್ಲ, ನಮ್ಮ ಸರ್ಕಾರ ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ಸಮಿತಿ ಶಿಫಾರಸಿನನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ 3ರಿಂದ 7ಕ್ಕೆ ಹೆಚ್ಚಿಸಿದೆ, ಒಂದು ಕೋಟಿ ರೂಪಾಯಿ ವರೆಗಿನ ಸರ್ಕಾರಿ ಗುತ್ತಿಗೆಗಳಲ್ಲಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಗುತ್ತಿಗೆದಾರರಿಗೆ ಶೇಕಡಾ 24.1ರಷ್ಟು ಮೀಸಲಾತಿ ಕಲ್ಪಿಸಲಾಗಿದೆ.

ಗುತ್ತಿಗೆ ಆಧಾರದ ನೇಮಕಾತಿಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಾತಿ ಅನ್ವಯಿಸಲು ನಿರ್ಧರಿಸಲಾಗಿದೆ. ಎಸ್‌ಸಿ/ಎಸ್‌ಟಿ ಕುಟುಂಬಗಳಿಗೆ ಸರ್ಕಾರ ಮಂಜೂರು ಮಾಡಿದ ಜಮೀನುಗಳ ಅನಧಿಕೃತ ಪರಭಾರೆಯನ್ನು ತಡೆಯಲು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಹಂಚಿಕೆಯಾಗುವ ಕೈಗಾರಿಕಾ ನಿವೇಶನಕ್ಕೆ ಶೇಕಡಾ 75ರಷ್ಟು ಸಹಾಯಧನ ನೀಡಲಾಗುತ್ತಿದೆ. ಇವೆಲ್ಲವೂ ಅನುಷ್ಠಾನಕ್ಕೆ ಬಂದಿರುವುದು ಕರ್ನಾಟಕದಲ್ಲಿ ಮಾತ್ರ.

ಕರ್ನಾಟಕದಲ್ಲಿ ಎಸ್‌ಸಿ‌ಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತರಲು ದೊಡ್ಡ ಮಟ್ಟದ ಜನಾಂದೋಲಗಳೇನು ನಡೆದಿರಲಿಲ್ಲ. ರಾಜ್ಯದ ಕಾಂಗ್ರೆಸ್ ಪಕ್ಷವು ದಲಿತ ಸಮುದಾಯದ ಮೇಲಿನ ಪ್ರಾಮಾಣಿಕ ಕಾಳಜಿಯ ಕಾರಣಕ್ಕಾಗಿ ಸ್ವಯಂ ಇಚ್ಛೆಯಿಂದ 2013ರ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಿತ್ತು. ಅಧಿಕಾರಕ್ಕೆ ಬಂದ ನಂತರ 2014-15ರಲ್ಲಿ ಕಾಯ್ದೆಯನ್ನು ಅನುಷ್ಠಾನಕ್ಕೆ ತಂದು ನಾವು ನುಡಿದಂತೆ ನಡೆದಿದ್ದೆವು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗಿದೆ.

ನರೇಂದ್ರ ಮೋದಿ ಅವರೇ, ಈಗಲೂ ಕಾಲ ಮಿಂಚಿಲ್ಲ, ರಾಷ್ಟ್ರಮಟ್ಟದಲ್ಲಿ ಎಸ್‌ಸಿ‌ಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ನಿಮ್ಮ ದಲಿತ ಕಾಳಜಿಯನ್ನು ಸಾಬೀತುಪಡಿಸಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲ್ ಹಾಕಿದ್ದಾರೆ.

ಜೊಮಾಟೊ ಸಹ ಸಂಸ್ಥಾಪಕಿ ‘ಆಕೃತಿ ಚೋಪ್ರಾ’ ರಾಜೀನಾಮೆ | Akriti Chopra resigns

ರಾಜ್ಯದ ಜನತೆಗೆ ಬಿಗ್ ಶಾಕ್ ; 10 ದಿನಗಳಲ್ಲಿ ‘ಅಡುಗೆ ಎಣ್ಣೆ’ ಬೆಲೆ ಶೇ.20ರಷ್ಟು ಹೆಚ್ಚಳ

Good News: ರೈತರಿಗೆ ಗುಡ್ ನ್ಯೂಸ್: ಸಂಪೂರ್ಣ, ಕನಿಷ್ಠ ದಾಖಲೆ ಹೊಂದಿದ್ದರೂ ‘ದರ್ಖಾಸ್ತು ಪೋಡಿ’- ಸಚಿವ ಕೃಷ್ಣ ಭೈರೇಗೌಡ

Share. Facebook Twitter LinkedIn WhatsApp Email

Related Posts

ಶ್ರೀಮಂತಿಕೆಯ ಸ್ಟೇಟಸ್ ಗಾಗಿ ಕಳ್ಳತನಕ್ಕಿಳಿದ ಪತಿರಾಯ : ಮಂಡ್ಯದಲ್ಲೋಬ್ಬ ಖತರ್ನಾಕ್ ಕಳ್ಳ ಅಂದರ್!

1 Min Read

BIG NEWS : ಜಾಮೀನು ಮಂಜೂರಾತಿಗೆ ಮಹಿಳೆ ಎಂಬ ಕಾರಣ ಸಾಲದು : ಹೈಕೋರ್ಟ್ ಅಭಿಪ್ರಾಯ!

1 Min Read

ಜೂ.1ರಿಂದ ಸರ್ಕಾರಿ ಶಾಲೆ ಪ್ರಾರಂಭ : ಶಾಲೆಗೆ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಿ : ಸಚಿವ ಮಧು ಬಂಗಾರಪ್ಪ ಕರೆ

1 Min Read
Recent News

IPL 2026: ‘ಆರ್‌ಸಿಬಿಯಿಂದ ಹೊರಗುಳಿಯುವುದು ನನ್ನ ವೈಯಕ್ತಿಕ ನಿರ್ಧಾರವಲ್ಲ’: ಮೌನ ಮುರಿದ ಯಶ್ ದಯಾಲ್

CBSE ಉತ್ತರ ಪತ್ರಿಕೆಗಳ ಮಿಸ್‌ಮ್ಯಾಚ್ ವಿವಾದ: ವಿದ್ಯಾರ್ಥಿಯ ಪರ ಬ್ಯಾಟ್ ಬೀಸಿದ ರಾಹುಲ್ ಗಾಂಧಿ; ಕೇಂದ್ರ ಸರ್ಕಾರದ ವಿರುದ್ಧ ಕಿಡಿ

ಶ್ರೀಮಂತಿಕೆಯ ಸ್ಟೇಟಸ್ ಗಾಗಿ ಕಳ್ಳತನಕ್ಕಿಳಿದ ಪತಿರಾಯ : ಮಂಡ್ಯದಲ್ಲೋಬ್ಬ ಖತರ್ನಾಕ್ ಕಳ್ಳ ಅಂದರ್!

BIG NEWS : ಜಾಮೀನು ಮಂಜೂರಾತಿಗೆ ಮಹಿಳೆ ಎಂಬ ಕಾರಣ ಸಾಲದು : ಹೈಕೋರ್ಟ್ ಅಭಿಪ್ರಾಯ!

State News
KARNATAKA

ಶ್ರೀಮಂತಿಕೆಯ ಸ್ಟೇಟಸ್ ಗಾಗಿ ಕಳ್ಳತನಕ್ಕಿಳಿದ ಪತಿರಾಯ : ಮಂಡ್ಯದಲ್ಲೋಬ್ಬ ಖತರ್ನಾಕ್ ಕಳ್ಳ ಅಂದರ್!

By ಸುರೇಶ್‌ KARNATAKA 1 Min Read

ಮಂಡ್ಯ : ಹೆಂಡತಿಯ ಮುಂದೆ ಸ್ಟೇಟಸ್ ತೋರಿಸಲು ಹೋಗಿ ಪೊಲೀಸರ ಕೈಗೆ ತಗಲಾಕ್ಕೊಂಡ ಐನಾತಿ ಪತಿಯೊಬ್ಬ ಇದೀಗ ಪೋಲೀಸರ ಅಥಿತಿಯಾಗಿದ್ದಾನೆ.…

BIG NEWS : ಜಾಮೀನು ಮಂಜೂರಾತಿಗೆ ಮಹಿಳೆ ಎಂಬ ಕಾರಣ ಸಾಲದು : ಹೈಕೋರ್ಟ್ ಅಭಿಪ್ರಾಯ!

ಜೂ.1ರಿಂದ ಸರ್ಕಾರಿ ಶಾಲೆ ಪ್ರಾರಂಭ : ಶಾಲೆಗೆ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಿ : ಸಚಿವ ಮಧು ಬಂಗಾರಪ್ಪ ಕರೆ

ಆನೆಧಾಮಕ್ಕೆ ಶೀಘ್ರವೇ ಟೆಂಡರ್, ಹೊಸ ಮೃಗಾಲಯ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಚಿವ ಈಶ್ವರ ಖಂಡ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.