ಮಂಡ್ಯ : ಇತ್ತೀಚಿಗೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ, ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಗಣೇಶ ಮೂರ್ತಿಯ ಮೇಲೆ ಕಲ್ಲೇಸೆತ ಹಾಗೂ ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಈ ಒಂದು ಪ್ರಕರಣದಲ್ಲಿ ಬಂಧಿತರಾಗಿದ್ದ 55 ಆರೋಪಿಗಳಿಗೆ ಜಾಮೀನು ಮಂಜೂರು ನೀಡಲಾಗಿದೆ.
ಹೌದು ನಾಗಮಂಗಲದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆಯ ಮೇಲೆ ಕಲ್ಲು ಎಸೆತ ಹಾಗೂ ಚಪ್ಪಲಿ ಎಸೆತ ಪ್ರಕರಣ ನಡೆದಿತ್ತು. ಸೆಪ್ಟೆಂಬರ್ 11ರಂದು ಆರೋಪಿಗಳು ಬಂಧನ ವಾಗಿದ್ದರು. ನಾಳೆ ನಾಡಿದ್ದು ರಜೆ ಹಿನ್ನೆಲೆಯಲ್ಲಿ ಆರೋಪಿಗಳನ್ನು ಸೋಮವಾರ ಬಿಡುಗಡೆಯಾಗಲಿದ್ದಾರೆ.ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಗಲಾಟೆ ನಡೆದಿತ್ತು.
ನಾಗಮಂಗಲ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಪ್ರತಿಭಟನೆ ಹೋರಾಟಗಳನ್ನು ನಡೆಸಿದ್ದರು.ಇದೀಗ ಬಂಧಿತ 55 ಆರೋಪಿಗಳಿಗೆ ಜಾಮೀನು ಮಂಜೂರು ನೀಡಲಾಗಿದೆ. ಮಂಡ್ಯದ 1ನೇ ಜಿಲ್ಲಾ ಮತ್ತು ಸಷೇನ್ಸ್ ನ್ಯಾಯಾಲಯ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ.