ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ಶಿರೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇರಳ ಮೂಲದ ಚಾಲಕ ಅರ್ಜುನ್ ನ ಮರಣೋತ್ತರ ಪರೀಕ್ಷೆ ಅಂತ್ಯವಾಗಿದೆ. 73 ದಿನದ ಬಳಿಕ ಅರ್ಜುನನ ಮೃತ ದೇಹವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
ಹೌದು, ಕಾರವಾರದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೇರಳ ಮೂಲದ ಚಾಲಕ ಅರ್ಜುನ ಮೃತ ದೇಹದ ಮರಣೋತ್ತರ ಪರೀಕ್ಷೆ ಅಂತ್ಯವಾಗಿದ್ದು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಎರಡು ದಿನಗಳ ಹಿಂದೆ ಗಂಗಾವಳಿ ನದಿಯಲ್ಲಿ ಚಾಲಕ ಅರ್ಜುನ್ ಹಾಗೂ ಆತನ ಲಾರಿ ಪತ್ತೆಯಾಗಿತ್ತು . ಇದೀಗ ಮೃತ ದೇಹವನ್ನು ವೈದ್ಯರು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದು, ಜಿಲ್ಲಾಡಳಿತದಿಂದ ಪ್ರಕೃತಿ ವಿಕೋಪದ ಅಡಿ 5 ಲಕ್ಷ ಪರಿಹಾರ ವಿತರಿಸಲಾಗಿದೆ