Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಕಲ್ಲಂಗಡಿ ಹಣ್ಣು ಸುರಕ್ಷಿತವೇ? ಮನೆಯಲ್ಲೇ ಮಾಡಿ ಈ ಸರಳ ಪರೀಕ್ಷೆ | Watermelon

02/05/2026 2:38 PM

SHOCKING: ಬೆಂಗಳೂರಲ್ಲಿ ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಶಾಕ್: ಮಹಿಳೆ ಸಾ*ವು, ಪತಿ ವಿರುದ್ಧ ಕೊ*ಲೆ ಆರೋಪ

02/05/2026 2:35 PM

BIG NEWS: ಬೆಂಗಳೂರಲ್ಲಿ 160 ಕೋಟಿ ಮೌಲ್ಯದ ಬಿಡಿಎ ಆಸ್ತಿ ಕಬಳಿಕೆ ಯತ್ನ; ಐವರ ವಿರುದ್ಧ ‘FIR’ ದಾಖಲು

02/05/2026 2:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!
KARNATAKA

ರಾಜ್ಯ ಸರ್ಕಾರದಿಂದ ‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

By kannadanewsnow5728/09/2024 6:12 AM

ಬೆಂಗಳೂರು: ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಾ, ಬಗರ್ ಹುಕುಂ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದಂತ ರೈತರಿಗೆ ಗುಡ್ ನ್ಯೂಸ್ ಒಂದು ಹೊರ ಬಿದ್ದಿದೆ. ಅದೇನೆಂದರೇ ಬಗರ್ ಹುಕುಂ ವಿಲೇ ಪ್ರಕ್ರಿಯೆ ಆರಂಭಗೊಳಿಸಲಾಗಿದೆ ಅಂತ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಬಗರ್ ಹುಕುಂ ನಮೂನೆ 57ರ ಅಡಿಯಲ್ಲಿ ಒಟ್ಟಾರೆ 9.80ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಅನರ್ಹ ಅರ್ಜಿಗಳೇ ಅಧಿಕ. ಈ ಅರ್ಜಿಗಳ ವಿಲೇವಾರಿಗೆ ಈಗಾಗಲೇ ರಾಜ್ಯಾದ್ಯಂತ 160 ಬಗರ್ ಹುಕುಂ ಸಮಿತಿಗಳನ್ನು ರಚಿಸಲಾಗಿದೆ. ಪ್ರತಿ ತಿಂಗಳೂ ಕನಿಷ್ಟ ಮಟ್ಟದ ಅರ್ಜಿ ವಿಲೇ ಆಗಬೇಕು, ಮುಂದಿನ ಎಂಟು ತಿಂಗಳಲ್ಲಿ ಎಲ್ಲಾ ಅರ್ಜಿಗಳನ್ನೂ ವಿಲೇಗೊಳಿಸಬೇಕು. ಅಲ್ಲದೆ, ಅರ್ಹರಿಗೆ ಭೂ ಮಂಜೂರು ಮಾಡಬೇಕು ಎಂದು ಈಗಾಗಲೇ ತಹಶೀಲ್ದಾರ್ ಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಮಟ್ಟದಲ್ಲಿ ಕನಿಷ್ಟ 4 ಲಕ್ಷ ರೈತರಿಗೆ ಸಂಬಂಧಿಸಿದ 69,437 ಸರ್ವೇ ನಂಬರ್ಗಳಲ್ಲಿ ನಮೂನೆ 1-5 ದಾಖಲೆಗಳನ್ನು ಪರಿಶೀಲಿಸಲಾಗಿದೆ. ಅಂದರೆ ಸಂಬಂಧ ಪಟ್ಟ ರೈತರ ಕಡತಗಳನ್ನು ತಯಾರು ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಈ ದಾಖಲೆಗಳನ್ನು ಒಂದುಗೂಡಿಸಿ ರೈತರು ಪೋಡಿಗೆ ಅರ್ಹರೇ ಎಂದು ಗುರುತಿಸಲಾಗುವುದು. ಆರ್ಐ, ಶಿರಸ್ತೇದಾರ್ ಹಾಗೂ ತಹಶೀಲ್ದಾರ್ ಈ ಬಗ್ಗೆ ಪರಿಗಣಿಸಿ ನಂತರ ನಮೂನೆ 6-10 ರ ಪ್ರಕ್ರಿಯೆಗೆ ಸರ್ವೇ ಇಲಾಖೆಗೆ ಪೋಡಿಗೆ ಶೀಫಾರಸು ಮಾಡುತ್ತಾರೆ. ತದನಂತರ ರೈತರಿಗೆ ಪೋಡಿ ಲಭ್ಯವಾಗುತ್ತದೆ” ಎಂದರು.

ರಾಜ್ಯಾದ್ಯಂತ ಶೇ. 81.74 ರಷ್ಟು ಆಧಾರ್ ಸೀಡಿಂಗ್

ರಾಜ್ಯಾದ್ಯಂತ ಈವರೆಗೆ ಶೇ. 81.74 ರಷ್ಟು ಆಧಾರ್ ಸೀಡಿಂಗ್ ಕೆಲಸವನ್ನು ಪೂರ್ಣಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, “ರಾಜ್ಯಾದ್ಯಂತ 4,09,87,831 ರಷ್ಟು ಜಮೀನುಗಳ ಆಧಾರ್ ಸೀಡಿಂಗ್ ಮಾಡುವುದು ಇಲಾಖೆಯ ಗುರಿ. ಈ ಪೈಕಿ ಸುಮಾರು 61 ಲಕ್ಷ ಜಮೀನುಗಳು ಕೃಷಿಯೇತರ ಚಟುವಟಿಕೆಗೆ ಉಪಯೋಗವಾಗುತ್ತಿದೆ. ಇದನ್ನು ಆಧಾರ್ ಸೀಡಿಂಗ್ ಮಾಡುವುದು ಸಾಧ್ಯವಿಲ್ಲ. ಏಕೆಂದರೆ ಅಲ್ಲಿ ನಿವೇಶನಗಳು ಇರುತ್ತದೆ. ನಾವು ಕೃಷಿ ಭೂಮಿಯಲ್ಲಿ ಮಾತ್ರ ಸೀಡಿಂಗ್ ಮಾಡಲು ಸಾಧ್ಯ. ಈವರೆಗೆ 2.15 ಕೋಟಿ ಜಮೀನುಗಳಿಗೆ ಆಧಾರ್ ಅಥೆಂಟಿಫಿಕೇಷನ್ ಕೆಲಸ ಮುಗಿಸಲಾಗಿದ್ದು, ಆಧಾರ್ ಸೀಡಿಂಗ್ ವಿಚಾರದಲ್ಲಿ ಶೇ. 81.74 ರಷ್ಟು ಪ್ರಗತಿ ಸಾಧಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಮುಂದುವರೆದು, “ರಾಜ್ಯಾದ್ಯಂತ 48,16,813 ಜಮೀನುಗಳ ಮಾಲೀಕರು ನಿಧನರಾಗಿದ್ದಾರೆ. ಆದರೆ, ಅವರ ಹೆಸರಲ್ಲೇ ಪಹಣಿ ಮುಂದುವರೆಯುತ್ತಿದೆ. ಈ ಎಲ್ಲರಿಗೂ ಶೀಘ್ರದಲ್ಲಿ ಫವತಿ ಖಾತೆ ಆಂದೋಲನದ ಅಡಿಯಲ್ಲಿ ಖಾತೆ ಬದಲಿಸಿಕೊಡಲಾಗುವುದು” ಎಂದು ಅವರು ತಿಳಿಸಿದರು.

Good news for farmers cultivating 'Bagar Hukum' by state government: 'Darkhastu Podi' application process begins ರಾಜ್ಯ ಸರ್ಕಾರದಿಂದ ‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್ : `ದರ್ಖಾಸ್ತು ಪೋಡಿ' ಅರ್ಜಿ ವಿಲೇ ಪ್ರಕ್ರಿಯೆ ಆರಂಭ
Share. Facebook Twitter LinkedIn WhatsApp Email

Related Posts

SHOCKING: ಬೆಂಗಳೂರಲ್ಲಿ ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಶಾಕ್: ಮಹಿಳೆ ಸಾ*ವು, ಪತಿ ವಿರುದ್ಧ ಕೊ*ಲೆ ಆರೋಪ

02/05/2026 2:35 PM2 Mins Read

BIG NEWS: ಬೆಂಗಳೂರಲ್ಲಿ 160 ಕೋಟಿ ಮೌಲ್ಯದ ಬಿಡಿಎ ಆಸ್ತಿ ಕಬಳಿಕೆ ಯತ್ನ; ಐವರ ವಿರುದ್ಧ ‘FIR’ ದಾಖಲು

02/05/2026 2:31 PM2 Mins Read

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಗರದಲ್ಲಿ ಸುಮಾರು 44 ಕಿ.ಮೀ ಉದ್ದದ ಡಬಲ್ ಡೆಕ್ಕರ್ ನಿರ್ಮಾಣ

02/05/2026 2:28 PM3 Mins Read
Recent News

ನಿಮ್ಮ ಕಲ್ಲಂಗಡಿ ಹಣ್ಣು ಸುರಕ್ಷಿತವೇ? ಮನೆಯಲ್ಲೇ ಮಾಡಿ ಈ ಸರಳ ಪರೀಕ್ಷೆ | Watermelon

02/05/2026 2:38 PM

SHOCKING: ಬೆಂಗಳೂರಲ್ಲಿ ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಶಾಕ್: ಮಹಿಳೆ ಸಾ*ವು, ಪತಿ ವಿರುದ್ಧ ಕೊ*ಲೆ ಆರೋಪ

02/05/2026 2:35 PM

BIG NEWS: ಬೆಂಗಳೂರಲ್ಲಿ 160 ಕೋಟಿ ಮೌಲ್ಯದ ಬಿಡಿಎ ಆಸ್ತಿ ಕಬಳಿಕೆ ಯತ್ನ; ಐವರ ವಿರುದ್ಧ ‘FIR’ ದಾಖಲು

02/05/2026 2:31 PM

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಗರದಲ್ಲಿ ಸುಮಾರು 44 ಕಿ.ಮೀ ಉದ್ದದ ಡಬಲ್ ಡೆಕ್ಕರ್ ನಿರ್ಮಾಣ

02/05/2026 2:28 PM
State News
KARNATAKA

SHOCKING: ಬೆಂಗಳೂರಲ್ಲಿ ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಶಾಕ್: ಮಹಿಳೆ ಸಾ*ವು, ಪತಿ ವಿರುದ್ಧ ಕೊ*ಲೆ ಆರೋಪ

By kannadanewsnow0902/05/2026 2:35 PM KARNATAKA 2 Mins Read

ಬೆಂಗಳೂರು: ಉತ್ತರ ತಾಲೂಕಿನ ಗೌಡಹಳ್ಳಿಯಲ್ಲಿ ನಡೆದ 30 ವರ್ಷದ ಸುಜಾತ ಅವರ ಅನುಮಾನಾಸ್ಪದ ಸಾವು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.…

BIG NEWS: ಬೆಂಗಳೂರಲ್ಲಿ 160 ಕೋಟಿ ಮೌಲ್ಯದ ಬಿಡಿಎ ಆಸ್ತಿ ಕಬಳಿಕೆ ಯತ್ನ; ಐವರ ವಿರುದ್ಧ ‘FIR’ ದಾಖಲು

02/05/2026 2:31 PM

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಗರದಲ್ಲಿ ಸುಮಾರು 44 ಕಿ.ಮೀ ಉದ್ದದ ಡಬಲ್ ಡೆಕ್ಕರ್ ನಿರ್ಮಾಣ

02/05/2026 2:28 PM

BIG NEWS : ನಾನ್ IPS ಅಧಿಕಾರಿಗಳಿಗೆ ಎಸ್ಪಿ ಹುದ್ದೆಗೆ ಭರ್ತಿ ನೀಡುವ ವಿಚಾರ : ‘KSAT’ ಆದೇಶ ಮಾರ್ಪಡಿಸಿದ ಹೈಕೋರ್ಟ್

02/05/2026 1:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.