ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣ ಸಂಬಂಧ ಕೋರ್ಟ್ ಆದೇಶದಂತೆ ಎಫ್ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣದ ತನಿಖೆಗಾಗಿ ನಾಲ್ವರು ಅಧಿಕಾರಿಗಳ ನೇತೃತ್ವದ ತಂಡವನ್ನು ಲೋಕಾಯುಕ್ತದಿಂದ ರಚಿಸಲಾಗಿದೆ.
ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರ ನೇತೃತ್ವದಲ್ಲಿ ಡಿವೈಎಸ್ಪಿ ಮಾಲತೀಶ್, ಚಾಮರಾಜನಗರ ಡಿವೈಎಸ್ಪಿ ಮ್ಯಾಥ್ಯೂ ಥಾಮಸ್ ಹಾಗೂ ಇನ್ಸ್ ಪೆಕ್ಟರ್ ಒಳಗೊಂಡ ನಾಲ್ಕು ತನಿಖಾ ತಂಡವನ್ನು ರಚನೆ ಮಾಡಲಾಗಿದೆ.
ಮುಡಾ ಹಗರಣ ಸಂಬಂಧದ ತನಿಖೆಯ ಕುರಿತಂತೆ, ದಾಖಲಾತಿಗಳು ಸೇರಿದಂತೆ ವಿವಿಧ ವಿಚಾರಗಳನ್ನು ಎಲ್ಲಾ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಲೋಕಾಯುಕ್ತ ಎಸ್ಪಿ ಉದೇಶ್ ಮಾಹಿತಿ ಹಂಚಿಕೊಂಡು, ಚರ್ಚಿಸಿದರು. ಹೀಗಾಗಿ ಮುಡಾ ಹಗರಣದ ಸಂಬಂಧ ಲೋಕಾಯುಕ್ತದಿಂದ ನಾಲ್ಕು ಟೀಂ ತನಿಖೆಗೆ ರಚನೆಯಾದಂತೆ ಆಗಿದೆ.
BREAKING : ಮುಸ್ಲಿಂರು ‘ಹಮ್ ಪಾಂಚ್ ಹಮಾರಾ ಪಂಚಿಸ್’ ಅಂತಾರೆ : ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ
BREAKING : ನನ್ನ ಹತ್ರ ಇರುವ ದಾಖಲೆ ಬಿಡುಗಡೆ ಮಾಡಿದ್ರೆ, 5-6 ಸಚಿವರು ರಾಜೀನಾಮೆ ನೀಡ್ತಾರೆ : HDK ಹೊಸ ಬೊಂಬ್!