ವಿಜಯಪುರ : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ವಿಪಕ್ಷಗಳು ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿ, ಹೋರಾಟ ಪ್ರತಿಭಟನೆ ನಡೆಸುತ್ತಿವೆ ಇದರ ಮಧ್ಯ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪಕ್ಷಾತೀತವಾಗಿ ಬೆಂಬಲಿಸುತ್ತೇನೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಹೌದು ಸಿಎಂ ಸಿದ್ದರಾಮಯ್ಯ ಅವರಿಗೆ ನಾನು ಪಕ್ಷಾತೀತವಾಗಿ ಬೆಂಬಲ ನೀಡುತ್ತೇನೆ. ಅವರ ನೇತೃತ್ವದಲ್ಲಿ ಎಲ್ಲ ಜನಾಂಗದವರಿಗೆ ನ್ಯಾಯ ಕೊಡುವ ಹೋರಾಟ ನಡೆದರೆ, ನಾವು ಅವರೊಂದಿಗೆ ಪಕ್ಷಾತೀತವಾಗಿ ಹೋಗಿ ಸಂಪೂರ್ಣ ಬೆಂಬಲಿಸುತ್ತೇವೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಒಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಸುಮಾರು 82 ಕೋಟಿ ರೂಪಾಯಿಗಳನ್ನು ಸರ್ಕಾರ ತಿಂದು ಹಾಕಿದೆ. ಈ ಒಂದು ಪ್ರಕರಣದ ವಿರುದ್ಧ ನಾವು ಬಸವಕಲ್ಯಾಣದಿಂದ ಬಳ್ಳಾರಿಯವರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. ಹೈಕಮಾಂಡ್ ಅನುಮತಿ ಮಾತ್ರ ಬೇಕಾಗಿದೆ.ಸಿದ್ದರಾಮಯ್ಯ ಅವರು ಈ ಹಿಂದೆ ಅಹಿಂದ ಮಾಡಿದಾಗ ನಾವು ಹೋಗಿದ್ದೆವು. ಈಗಲೂ ಎಲ್ಲ ಜನಾಂಗದವರ ನ್ಯಾಯಕ್ಕಾಗಿ ಸಿದ್ದರಾಮಯ್ಯನವರು ಹೋರಾಟ ಮಾಡಿದರೆ ಪಕ್ಷಾತೀತವಾಗಿ ಬೆಂಬಲಿಸುವೆ ಎಂದರು.