ಮೈಹಾರ್: ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ 25 ಕಿ.ಮೀ ದೂರದಲ್ಲಿರುವ ನಾದನ್ ದೆಹತ್ ಪೊಲೀಸ್ ಠಾಣೆಯ ಬಳಿ ಈ ಅಪಘಾತ ಸಂಭವಿಸಿದೆ.
ಪೊಲೀಸರ ಪ್ರಕಾರ, ಪ್ರಯಾಗ್ರಾಜ್ನಿಂದ ನಾಗ್ಪುರಕ್ಕೆ ತೆರಳುತ್ತಿದ್ದ ಬಸ್ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಲ್ಲು ತುಂಬಿದ ಡಂಪರ್ ಟ್ರಕ್ಗೆ ಡಿಕ್ಕಿ ಹೊಡೆದಿದೆ.
ಗಾಯಗೊಂಡ ಆರು ಮಂದಿಯನ್ನು ಸತ್ನಾಗೆ ಕಳುಹಿಸಲಾಗಿದೆ
ಗಾಯಗೊಂಡವರಲ್ಲಿ ಆರು ಜನರ ಸ್ಥಿತಿ ಗಂಭೀರವಾಗಿದೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸತ್ನಾಕ್ಕೆ ಕಳುಹಿಸಲಾಗಿದೆ ಎಂದು ಮೈಹಾರ್ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಅಗರ್ವಾಲ್ ತಿಳಿಸಿದ್ದಾರೆ. ಉಳಿದ ಗಾಯಾಳುಗಳು ಮೈಹಾರ್ ಮತ್ತು ಅಮರ್ಪಟಾನ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಅಪಘಾತದಲ್ಲಿ ಗಾಯಗೊಂಡ 17-20 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಎಸ್ಪಿ ಅಗರ್ವಾಲ್ ತಿಳಿಸಿದ್ದಾರೆ.
#WATCH | Madhya Pradesh: On collision of a bus and dumper in the Maihar District, Maihar SP Sudhir Agarwal says, "In this accident, 17-20 injured have been admitted to different hospitals… 6 people have lost their lives. The bus was going from Prayagraj to Nagpur… The… pic.twitter.com/XhzyH4w17L
— ANI (@ANI) September 29, 2024
ಆರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬಸ್ ಪ್ರಯಾಗ್ ರಾಜ್ ನಿಂದ ನಾಗ್ಪುರಕ್ಕೆ ಹೋಗುತ್ತಿತ್ತು. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಡಂಪರ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಅತ್ಯಾಚಾರ ಆರೋಪ ಪ್ರಕರಣ: ಶಾಸಕ ಮುನಿರತ್ನಗೆ ಸೇರಿದ 11 ಕಡೆ ‘SIT’ ದಾಳಿ, ಮಹತ್ವದ ದಾಖಲೆ ವಶಕ್ಕೆ