ಮೈಸೂರು : ಈ ಬಾರಿ ಮೈಸೂರು ದಸರಾ ಕಾರ್ಯಕ್ರಮಕ್ಕೆ ರಾಜವಂಶಸ್ಥೆ ಆದಂತಹ ಪ್ರಮೋದ ದೇವಿ ಒಡೆಯರ್ ಅವರಿಗೆ ಮೈಸೂರು ಜಿಲ್ಲಾ ಆಡಳಿತ ಅಧಿಕೃತವಾಗಿ ಆಹ್ವಾನ ನೀಡಿದೆ.
ಜಿಲ್ಲಾ ಉಸ್ತುವಾರಿ ಸಚಿವ HC ಮಹಾದೇವಪ್ಪ ಅವರಿಂದ ರಾಜವಂಶಸ್ಥೆ ಪ್ರಮೋದಾ ದೇವಿ ಅವರಿಗೆ ಅಹ್ವಾನ ನೀಡಲಾಯಿತು. ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಸೇರಿದಂತೆ ಹಲವರು ಸಚಿವರಿಗೆ ಸಾಥ್ ನೀಡಿದ್ದಾರೆ. ಈ ವೇಳೆ ಪ್ರಮೋದಾ ದೇವಿಗೆ ಗೌರವಧನ ನೀಡಿ ಜಿಲ್ಲಾಡಳಿತ ಆಹ್ವಾನ ನೀಡಿದೆ ಎಂದು ತಿಳಿದುಬಂದಿದೆ.