ಶ್ರೀನಗರ : ಇಂದು ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಎಐಸಿಸಿ ಮಲ್ಲಿಕಾರ್ಜುನ ಖರ್ಗೆಯವರು, ಅಸ್ವಸ್ಥರಾಗಿ ಕುಸಿದು ಬಿದ್ದಿರುವ ಘಟನೆ ನಡೆದಿತ್ತು. ಇದೇ ವೇಳೆ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಾಗುತ್ತದೆ ಎಂಬ ಹೇಳಿದ್ದು ಕೂಡ ಭಾರೀ ವೈರಲ್ ಆಗುತ್ತಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವ ವಿಡಿಯೋ ಸದ್ಯ ಬಾರಿ ವೈರಲ್ ಆಗಿದೆ.ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾದರು.ಬಳಿಕ ಸುಧಾರಿಸಿಕೊಂಡು ಮಾತನಾಡಲು ಶುರು ಮಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಾಗುತ್ತೆ ಎಂದು ಹೇಳಿದ್ದು, ಈ ಹೇಳಿಕೆ ಸದ್ಯ ವೈರಲ್ ಆಗಿದೆ.
ಅಸ್ವಸ್ಥಗೊಂಡಿದ್ದ ಅವರು ಬಳಿಕ ಸುಧಾರಿಸಿಕೊಂಡು ಮತ್ತೆ ಭಾಷಣ ಆರಂಭಿಸಿದರು. ಆದರೆ ಮಲ್ಲಿಕಾರ್ಜುನ ಖರ್ಗೆ ಅವರ ಈ ಹೇಳಿಕೆಯು ಬಾಯಿತಪ್ಪಿನಿಂದ ಬಂದದ್ದು ಅಥವಾ ಉದ್ದೇಶಪೂರ್ವಕವಾಗಿ ಹೇಳಿದ್ದಾರಾ ಎಂದು ಚರ್ಚೆಗಳು ನಡೆಯುತ್ತಿದೆ.ದೌರ್ಬಲ್ಯದ ಕ್ಷಣದಲ್ಲಿ ಸತ್ಯ ಹೊರಬರುತ್ತದೆ ಎಂದು ಕೆಲವರು ಕಮೆಂಟ್ ಮಾಡುತ್ತಿದ್ದರೆ ಮತ್ತೆ ಕೆಲವರು ಸತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಕಾಮೆಂಟ್ ಹಾಕುತ್ತಿದ್ದಾರೆ.
Kharge ji was clearly unwell, but CONg members made him continue his speech
But listen very carefully to what he says at the end “CONg hukumat mein aayi toh aatankwad badhega”
Truth comes out in a moment of weakness 🔥🔥🔥pic.twitter.com/PbVy6l0hnO
— Sameer (@BesuraTaansane) September 29, 2024