ರಾಮದುರ್ಗ : ಜನರ ಬೆಂಬಲ ನೋಡಿದ್ರೆ ಬಿಜೆಪಿಯಿಂದ ಮುಂದೆ ನಾನೇ ಸಿಎಂ ಆಗುತ್ತೇನೆ. ಹಿಂದುಪರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯಲ್ಲ.. ರಾಯಣ್ಣಗೆ ತಮ್ಮವರೇ ಮೋಸ ಮಾಡಿದ್ದು, ನನಗೂ ನನ್ನ ಜೊತೆ ಇದ್ದವರೆ ಚೂರಿ ಹಾಕುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದರು.
ಕೆಲವರು ಸಿಎಂ ಆಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ.ಇದರಲ್ಲಿ ಕಾಂಗ್ರೆಸ್ನವರೂ ಇದ್ದಾರೆ, ಬೇರೆ ಪಕ್ಷದವರೂ ಇದ್ದಾರೆ. ಸಾವಿರ ಕೋಟಿ ಹಣ ಇಟ್ಟುಕೊಂಡು ಸಿಎಂ ಆಗಲು ಸಿದ್ಧರಿದ್ದಾರೆ ಎಂದು ಸ್ಪೋಟಕ ವಾದಂತಹ ಹೇಳಿಕೆಯನ್ನು ನೀಡಿದ್ದಾರೆ.
ಬಿಜೆಪಿಯಲ್ಲಿ ಭಿನ್ನಮತ ಇದೆ. ಪಕ್ಷದ ಗೊಂದಲಗಳ ಬಗ್ಗೆ ಹೈಕಮಾಂಡ್ಗೆ ಮಾಹಿತಿ ರವಾನೆ ಮಾಡಲಾಗಿದೆ. ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ಸೂಚಿಸಿದೆ. ಹೀಗಾಗಿ ನಾವು ಹೆಚ್ಚು ಮಾತಾಡಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾಯಿಸುವ ಅಧಿಕಾರ ನಮಗಿಲ್ಲ. ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೆ. ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತೋ ಕಾದು ನೋಡುತ್ತೇವೆ ಎಂದು ಹೇಳಿದ್ದಾರೆ.