ನವದೆಹಲಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣದ ಕುರಿತು ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಡೆಸಲಿದೆ.
ತಿರುಪತಿ ಲಡ್ಡು ವಿವಾದಕ್ಕೆ ಸಂಬಂದಿಸಿದಂತೆ ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಗಳನ್ನು ಇಂದು ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ. ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತು ರಾಜ್ಯ ಸಭಾ ಸಂಸದ ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಅಧ್ಯಕ್ಷ ವೈ.ವಿ ಸುಬ್ಬಾ ರೆಡ್ಡಿ ಅವರು ಸಲ್ಲಿಸಿದ್ದಂತ ಅರ್ಜಿಗಳ ವಿಚಾರಣೆಯನ್ನು ನಡೆಸಲಿದೆ.
ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ಹಿಂದಿನ ವೈಎಸ್ ಆರ್ ಕಾಂಗ್ರೆಸ್ ಸರ್ಕಾರದಲ್ಲಿ ತಿರುಪತಿ ದೇವಸ್ಥಾನದಿಂದ ಲಡ್ಡುಗಳನ್ನು ಪ್ರಸಾದವಾಗಿ ನೀಡಿದ್ದಾಗ ಅದರಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಇಂತಹ ಲಡ್ಡು ವಿವಾದದ ಬಗ್ಗೆ ಸಲ್ಲಿಸಿದ್ದಂತ ಅರ್ಜಿಗಳನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.