ಚಾಮರಾಜನಗರ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಡಿಜೆಗೆ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಮೂಡ್ನಾಕೂಡು ಗ್ರಾಮದಲ್ಲಿ ದೇವರ ಉತ್ಸವದಲ್ಲಿ ಡ್ಯಾನ್ಸ್ ಮಾಡುವಾಗ ಬಾಬು (42) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೂಡ್ನಾಕೂಡು ಗ್ರಾಮದಲ್ಲಿ ಗೌರಿ ವಿಸರ್ಜನೆ ಅಂಗವಾಗಿ ಕಲ್ಯಾಣ ಬಸವೇಶ್ವರ ದೇವಸ್ಥಾನದಲ್ಲಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಉತ್ಸವದ ವೇಳೆ ಡಿಜೆ ಹಾಕಿಕೊಂಡು ಯುವಕರು ಡ್ಯಾನ್ಸ್ ಮಾಡುತ್ತಿದ್ದರು. ಬಾಬು ಕೂಡ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.