ಅಹಮದಾಬಾದ್ : ಗುಜರಾತ್ನ ಅಹಮದಾಬಾದ್ನಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ನೋಟುಗಳಲ್ಲಿ ಮಹಾತ್ಮ ಗಾಂಧಿ ಬದಲಿಗೆ ಹಿರಿಯ ಹಿಂದಿ ಸಿನಿಮಾ ನಟ ಅನುಪಮ್ ಖೇರ್ ಅವರ ಚಿತ್ರಗಳು ಪತ್ತೆಯಾಗಿವೆ.
ಇಂತಹ ಸಾವಿರಾರು ರೂ.500 ನೋಟುಗಳನ್ನು ಅಹಮದಾಬಾದ್ ಪೊಲೀಸರು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೊತ್ತ 1 ಕೋಟಿ 60 ಲಕ್ಷ ಎಂದು ಹೇಳಲಾಗುತ್ತಿದೆ.
ಅಷ್ಟೇ ಅಲ್ಲ, ನೋಟಿನ ಮೇಲೆ ‘ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ’ ಎಂದು ಬರೆಯುವ ಬದಲು ‘ರೆಸೋಲ್ ಬ್ಯಾಂಕ್ ಆಫ್ ಇಂಡಿಯಾ’ ಎಂದು ಬರೆಯಲಾಗಿದೆ. ಈ ನಕಲಿ ನೋಟುಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಇದೀಗ ಸ್ವತಃ ಅನುಪಮ್ ಖೇರ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಅವರು ತಮ್ಮ ಮುದ್ರಿತ ನೋಟಿನ ಫೋಟೋವನ್ನು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ