ಕೋಲಾರ : ಭೂಮಿ ಪರಿವರ್ತನೆ ಮಾಡಿಕೊಡಲು ಆರ್.ಐ ಮತ್ತು ಕೇಸ್ ವರ್ಕರ್, ರೈತರೊಬ್ಬರ ಬಳಿ ಲಕ್ಷಾಂತರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಗಿ ಬಿದ್ದಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಹೌದು ಆರ್.ಐ ಗೋಪಾಲಕೃಷ್ಣ ಹಾಗೂ ಕೇಸ್ ವರ್ಕರ್ ನಾಗೇಂದ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭೂಮಿ ಪರಿವರ್ತನೆಗೆ 8.5 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಹೊಸಕೋಟೆ ಮೂಲದ ಮಹೇಶ್ ಎಂಬವರಿಂದ ಇವರು ಲಂಚ ಸ್ವೀಕರಿಸುತ್ತಿದ್ದರು ಎಂದು ತಿಳಿದುಬಂದಿದೆ.
ಆಲಂಬಾಡಿ ಗ್ರಾಮದ 5 ಎಕರೆ ಭೂಮಿ ಪರಿವರ್ತನೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಆಲಂಬಾಡಿ ಗ್ರಾಮದ 5 ಎಕರೆ ಭೂಮಿ ಪರಿವರ್ತನೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಸ್ವೀಕರಿಸುತ್ತಿದ್ದ ವೇಳೆ ಗೋಪಾಲಕೃಷ್ಣ ಹಾಗೂ ಕೇಸ್ ವರ್ಕರ್ ನಾಗೇಂದ್ರನನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.