ಬಳ್ಳಾರಿ : ಪ್ರಧಾನಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಅಭಿವೃದ್ಧಿಪಡಿಸಲು ಪಂಗಡ ಜನಾಂಗದವರು ಹೆಚ್ಚಾಗಿರುವ ಬಳ್ಳಾರಿ ಜಿಲ್ಲೆಯ 5 ವಲಯಗಳಿಂದ (ತಾಲ್ಲೂಕುಗಳಿಂದ) ಒಟ್ಟು 59 ಗ್ರಾಮಗಳನ್ನು ಆಯ್ಕೆಮಾಡಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಭಾರತ ಸರ್ಕಾರ ಬುಡಕಟ್ಟು ಮಂತ್ರಾಲಯ, ನವದೆಹಲಿ ಇವರ ಆದೇಶದಂತೆ, ಜಿಲ್ಲೆಯ ಒಟ್ಟು 59 ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸಲು ಕ್ರಮಕೈಗೊಳ್ಳಲಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೀಸಲಿರುವ 79,156 ಕೋಟಿ ರೂ.ಗಳಲ್ಲಿ ಬುಡಕಟ್ಟು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ದೇಶದ 63,000 ಗ್ರಾಮಗಳಲ್ಲಿ ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ.
ಕೇಂದ್ರ ಬುಡಕಟ್ಟು ಮಂತ್ರಾಲಯ ಈ ಯೋಜನೆಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಹೊತ್ತಿದೆ. ದೇಶದ ಸುಮಾರು 8 ಕೋಟಿ ಜನರಿಗೆ ಯೋಜನೆಯಿಂದ ಅನುಕೂಲವಾಗಲಿದೆ ಎಂದು ಡಿಸಿಯವರು ತಿಳಿಸಿದ್ದಾರೆ.
2024-25 ರಿಂದ 2028-29ನೇ ಸಾಲಿನವರೆಗೆ 5 ವರ್ಷಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. 2024-25 ರಿಂದ 2025-26ನೇ ಸಾಲಿಗೆ ಮೊದಲ ಹಂತದಲ್ಲಿ 4000 ಕೋಟಿ ಅನುದಾನವನ್ನು ಪ್ರಧಾನಮಂತ್ರಿ ಜನಜಾತಿ ಉನ್ನತ ಗ್ರಾಮ ಅಭಿಯಾನದಡಿ 17 ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯ 59 ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕ್ರಿಯಾಯೋಜನೆ ಸಿದ್ದಪಡಿಸಲಾಗಿದೆ.
ಈ ಯೋಜನೆಗೆ ಒಳಪಟ್ಟ 59 ಗ್ರಾಮದ ಜನರು ಯೋಜನೆಯ ಸದುಪಯೋಗಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BREAKING : ತಿರುಪತಿ ಲಡ್ಡು ವಿವಾದ : ವಿಚಾರಣೆಯನ್ನು ಅ.3ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್! | Tirupati Laddu Row