ಉಡುಪಿ : ರಾಜ್ಯದಲ್ಲಿ ಇಂದು ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಅಪಘಾತದ ಘಟನೆ ಮಾಸುವ ಮನವೇ ಇದೀಗ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಮತ್ತೊಂದು ಭೀಕರ ಅಪಘಾತ ಸಂಬಂಧಿಸಿದ್ದು, ಲಾರಿ ಹಾಗೂ ಬೈಕ್ ಮಧ್ಯ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಮೂವರು ಮಕ್ಕಳು ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಹೌದು ಕಾರ್ಕಳ ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ತಂದೆ ಮೂವರು ಮಕ್ಕಳು ಸಾವನಪ್ಪಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೊಸಗುಡ್ಡೆ ಬಳಿ ಈ ಒಂದು ದುರಂತ ಸಂಭವಿಸಿದೆ. ಸುರೇಶ್ ಆಚಾರ್ಯ (36) ಮಕ್ಕಳಾದ ಸಮೀಕ್ಷ, (7) ಸುಶ್ಮಿತಾ (5) ಸುಶಾಂತ್ (2) ಸಾವನ್ನಪ್ಪಿದ್ದಾರೆ ಇನ್ನು ಪತ್ನಿ ಮೀನಾಕ್ಷಿ ಆಚಾರ್ಯ (32) ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.