ಬೆಂಗಳೂರು: ನಗರದಲ್ಲಿ ಮಹಿಳಾ ಸಬಲೀಕರಣಕ್ಕೆ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಇದರ ಭಾಗವಾಗಿ ಉಚಿತ ಇ-ಆಟೋಗಳನ್ನು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದವರಿಗೆ ವಿತರಣೆ ಮಾಡಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮಹಿಳಾ ಸಬಲೀಕರಣದಲ್ಲಿ ದಿಟ್ಟ ಹೆಜ್ಜೆ ಇಡುತ್ತಾ ಬೆಂಗಳೂರು ನಗರ ಪೊಲೀಸರು, ಪರಿಹಾರ, ಯುನೈಟೆಡ್ ವೇ ಬೆಂಗಳೂರು ಹಾಗೂ ಎನ್ ಟಿಟಿ ಡಾಟಾ ಸಹಯೋಗದಲ್ಲಿ ಕಮಾಂಡ್ ಸೆಂಟರ್ ನಲ್ಲಿ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ 5 ಉಚಿತ ಇ- ಆಟೋಗಳನ್ನು ವಿತರಣೆ ಮಾಡಲಾಯಿತು ಎಂದು ತಿಳಿಸಿದೆ.
In a powerful step towards women's empowerment, Bengaluru City Police and Parihar, in collaboration with United Way Bengaluru and NTT Data, distributed 5 free E-Autos to women beneficiaries who are victims of domestic violence. @CPBlr and other senior officers handed over the… pic.twitter.com/8AXGT7W1X6
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) September 30, 2024
ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ಹಾಗೂ ಹಿರಿಯ ಅಧಿಕಾರಿಗಳು ಸಾಂಕೇತಿಕವಾಗಿ ಫಲಾನುಭವಿಗಳಿಗೆ ಕೀ ವಿತರಣೆ ಮಾಡಿ ಮಹಿಳೆಯರ ಸಬಲೀಕರಣಕ್ಕೆ ಉತ್ತೇಜನ ನೀಡಿದರು.
ಜತೆಗೆ ಈ ಮಹಿಳೆಯರು ಚಾಲನೆ ಮಾಡಿದ ಆಟೋದಲ್ಲಿ ಪೊಲೀಸ್ ಅಧಿಕಾರಿಗಳು ಸವಾರಿ ಮಾಡಿ ಈ ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬಿದರು ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
BREAKING : ತಿರುಪತಿ ಲಡ್ಡು ವಿವಾದ : ವಿಚಾರಣೆಯನ್ನು ಅ.3ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್! | Tirupati Laddu Row