ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಮುಡಾ ಹಗರಣದಲ್ಲಿ ಇಸಿಆರ್ ದಾಖಲಿಸಲಾಗಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ಲೋಕಾಯುಕ್ತದ ಬೆನ್ನಲ್ಲೇ ಇಡಿ ಸಂಕಷ್ಟ ಕೂಡ ಎದುರಾಗಿದೆ.
ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಇದೀಗ ದೂರುದಾರ ಸ್ನೇಹಮಯಿ ಕೃಷ್ಣ ನೀಡಿದಂತ ದೂರಿನ ಆಧಾರದ ಮೇಲೆ ಕೇಂದ್ರ ಸಂಸ್ಥೆ ತನ್ನ ಜಾರಿ ಪ್ರಕರಣ ಮಾಹಿತಿ ವರದಿಯಲ್ಲಿ (ECIR) ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣವನ್ನು ಇಡಿ ದಾಖಲಿಸಿದೆ. ಅಲ್ಲದೇ ಮನಿ ಲಾಂಡರಿಂಗ್ ತಡೆ ಕಾಯ್ದೆಯ (PMLA) ಸೆಕ್ಷನ್ಗಳಡಿಯಲ್ಲಿ ಕೇಸ್ ದಾಖಲಿಸಿ ತನಿಖೆ ನಡೆಸುವಂತ ಸಾಧ್ಯತೆ ಇದೆ.
ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ‘BMTC ಬಸ್’ ಸಂಚಾರ ಆರಂಭ | BMTC Bus Service
BREAKING : ತಿರುಪತಿ ಲಡ್ಡು ವಿವಾದ : ವಿಚಾರಣೆಯನ್ನು ಅ.3ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್! | Tirupati Laddu Row