ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ವಿರುದ್ಧ ‘ECIR’ ದಾಖಲಿಸಿದ್ದಾರೆ. ಒಂದು ವೇಳೆ ಈ ಒಂದು ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಬಂಧನವಾದರೆ, ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಆಡಳಿತ ರಾಜ್ಯದಲ್ಲೂ ಮರುಕಳಿಸುತ್ತಾ ಎಂದು ಜನರಲ್ಲಿ ಕುತೂಹಲ ಮೂಡಿಸಿದೆ.
ಹೌದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಮುಡಾ ಹಗರಣದಲ್ಲಿ ECIR ದಾಖಲಿಸಲಾಗಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ಲೋಕಾಯುಕ್ತದ ಬೆನ್ನಲ್ಲೇ ಇಡಿ ಸಂಕಷ್ಟ ಕೂಡ ಎದುರಾಗಿದೆ. ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಇದೀಗ ದೂರುದಾರ ಸ್ನೇಹಮಯಿ ಕೃಷ್ಣ ನೀಡಿದಂತ ದೂರಿನ ಆಧಾರದ ಮೇಲೆ ಕೇಂದ್ರ ಸಂಸ್ಥೆ ತನ್ನ ಜಾರಿ ಪ್ರಕರಣ ಮಾಹಿತಿ ವರದಿಯಲ್ಲಿ (ECIR) ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣವನ್ನು ಇಡಿ ದಾಖಲಿಸಿದೆ. ಅಲ್ಲದೇ ಮನಿ ಲಾಂಡರಿಂಗ್ ತಡೆ ಕಾಯ್ದೆಯ (PMLA) ಸೆಕ್ಷನ್ಗಳಡಿಯಲ್ಲಿ ಕೇಸ್ ದಾಖಲಿಸಿ ತನಿಖೆ ನಡೆಸುವಂತ ಸಾಧ್ಯತೆ ಇದೆ.
ಹಾಗಾಗಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಅಬಕಾರಿ ನೀತಿ ಹಗರಣದಲ್ಲಿ ಜೈಲಿನಲ್ಲಿದ್ದಾರೆ. ಸದ್ಯ ಹಾಲಿ ಸಿಎಂ ಅತಿಶಿ ಅವರು ಅಧಿಕಾರ ಸ್ವೀಕಾರ ಮಾಡೋಕು ಮುಂಚೆ ಕೇಜ್ರಿವಾಲ್ ಜೈಲಿನಲ್ಲಿ ಇದ್ದುಕೊಂಡೆ ಆಡಳಿತ ನಡೆಸಿದ್ದರು. ಹಾಗಾಗಿ ಮುಡಾ ಹಗರಣದಲ್ಲಿ ಅಕಸ್ಮಾತ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂಧನವಾದರೂ ಕೂಡ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದೆ ಜೈಲಿನಲ್ಲಿದ್ದುಕೊಂಡೆ ಅಧಿಕಾರ ನಡೆಸುತ್ತಾರಾ ಎಂದು ಜನರಲ್ಲಿ ಗೊಂದಲ ಮೂಡಿದೆ.
ಇನ್ನೊಂದಡೆ ಬಿಜೆಪಿ ನಾಯಕರು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಪ್ರತಿಭಟನೆ, ಹೋರಾಟ ನಡೆಸಿದ್ದಾರೆ. ಆದರೂ ಕೂಡ ಸಿದ್ದರಾಮಯ್ಯ ಪದೇಪದೇ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆದರೆ ಇದೀಗ ಜಾರಿ ನಿರ್ದೇಶನಾಲಯ ECIR ದಾಖಲಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇಡಿ ಸಂಕಷ್ಟವಾಗಲಿದೆ. ಹಾಗಾಗಿ ಒಂದು ಪ್ರಕರಣ ತೀವ್ರ ಕುತೂಹಲ ಮೂಡಿಸಿದೆ.