ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ಎದುರಾಗಿದ್ದು, ಸ್ನೇಹಮಯಿ ಕೃಷ್ಣ ಅವರು ದೂರು ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಇಂದು ಇಡಿ ಅಧಿಕಾರಿಗಳು ಇಸಿಐಆರ್ ದಾಖಲಿಸಿಕೊಂಡಿದ್ದಾರೆ. ಹಾಗಾಗಿ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಡಾ ಕಚೇರಿ, ಸಿಎಂ ಸಿದ್ದರಾಮಯ್ಯ ನಿವಾಸ ಹಾಗೂ ಕಂದಾಯ ಇಲಾಖೆ ಮೇಲು ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳ ಮನೆಯ ಮೇಲೆ ಇಡಿ ದಾಳಿ ಮಾಡಲಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುಡಾ ಕಚೇರಿ, ಕಂದಾಯ ಇಲಾಖೆಯ ಮೇಲು ಇಡಿ ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ದಾಳಿ ಮಾಡಿ ದಾಖಲೆಗಳನ್ನು ಕಲೆ ಹಾಕಲಿರುವ ಇಡಿ ಅಧಿಕಾರಿಗಳು, ಕೇಸಿಗೆ ಸಂಬಂಧಿಸಿದಂತೆ ಮುಡಾ ಅಧಿಕಾರಿಗಳ ವಿಚಾರಣೆ ನಡೆಸಲಿದ್ದಾರೆ.
ಅಲ್ಲದೆ ಹಗರಣದಲ್ಲಿ ಆರೋಪಿಗಳಿಗೆ ನೋಟಿಸ್ ನೀಡಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಅಲ್ಲದೆ ಮುಡಾ ಹಾಗೂ ಕಂದಾಯ ಇಲಾಖೆಯಲ್ಲೂ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇಡಿಗೆ ಸಮನ್ಸ್ ನೀಡಿ ಆರೋಪಿಗಳನ್ನು ವಿಚಾರಣೆಗೆ ಕರೆಯುವ ಅಧಿಕಾರವಿದೆ. ಹಾಗಾಗಿ ತನಿಖೆಯ ಹಂತದಲ್ಲಿ ಆಸ್ತಿಗಳನ್ನು ಸೀಜ್ ಮಾಡುವ ಅಧಿಕಾರವಿದೆ. ಈ ಹಿನ್ನೆಲೆಯಲ್ಲಿ ಈ ಒಂದು ಹಗರಣ ಯಾವ ಹಂತಕ್ಕೆ ಹೋಗಲಿದೆ ಎಂಬುದು ಕಾದು ನೋಡಬೇಕಾಗಿದೆ.