Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೊಪ್ಪಳದಲ್ಲಿ ಘೋರ ದುರಂತ : ಲಾರಿಯಿಂದ ಪೈಪ್ ಇಳಿಸುವಾಗ ಮೂವರು ಕಾರ್ಮಿಕರು ಸಾವು!

22/05/2025 4:20 PM

ಪರಮೇಶ್ವರ್ ಪ್ರಾಮಾಣಿಕರು, ಯಾವುದೇ ತಪ್ಪು ಮಾಡಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

22/05/2025 4:17 PM

ಬೆಂಗಳೂರಲ್ಲಿ ಮಳೆಯಿಂದಾಗುತ್ತಿರುವ ಸಮಸ್ಯೆ ನಿವಾರಣೆ ನಮ್ಮ ಜವಾಬ್ದಾರಿ: ಡಿಸಿಎಂ ಡಿ.ಕೆ ಶಿವಕುಮಾರ್

22/05/2025 4:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIGG NEWS: ‘ಹಾಸನಾಂಬ ದೇವಾಲಯ ಓಪನ್’ಗೆ ಡೇಟ್ ಫಿಕ್ಸ್: ಅ.24ರಿಂದ ನ.3ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ | Hasanamba Temple
KARNATAKA

BIGG NEWS: ‘ಹಾಸನಾಂಬ ದೇವಾಲಯ ಓಪನ್’ಗೆ ಡೇಟ್ ಫಿಕ್ಸ್: ಅ.24ರಿಂದ ನ.3ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ | Hasanamba Temple

By kannadanewsnow0930/09/2024 8:45 PM

ಹಾಸನ: ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲು ಡೇಟ್ ಫಿಕ್ಸ್ ಆಗಿದೆ. ಅಕ್ಟೋಬರ್ 24ರಂದು ಬಾಗಿಲು ಓಪನ್ ಆಗಲಿದ್ದು, ನವೆಂಬರ್.3ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವವನ್ನು ಆಯೋದಿಸಲಾಗಿದೆ.

ಹಾಸನ ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನು ಅತ್ಯಂತ ಅಚ್ಚುಕಟ್ಟಾಗಿ ಆಚರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸುವಂತೆ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್ ರಾಜಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ-2024 ಹ್ಯಾಪ್ ,ಪೊಸ್ಟರ್ ಬಿಡುಗಡೆ ಮಾಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಹಾಸನಾಂಬ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಮೂಲಭೂತ ಸೌಕರ್ಯ ಸೇರಿದಂತೆ ಸುಗಮ ದರ್ಶನಕ್ಕೆ ಯಾವುದೇ ಅಡಚಣೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಕ್ಟೋಬರ್ 24 ರಂದು ಹಾಸನಾಂಬ ದೇವಸ್ಥಾನದ ಬಾಗಿಲು ತೆರೆಯಲಾಗುವುದು ಎಂದ ಅವರು ನವಂಬರ್ 3ರವರೆಗೂ ಜಾತ್ರಾ ಮಹೋತ್ಸವ ಜರುಗಲಿದೆ. ಒಟ್ಟು 11 ದಿನದಲ್ಲಿ 9 ದಿನ ಮಾತ್ರ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಆದ್ದರಿಂದ ಕಡಿಮೆ ಸಮಯದಲ್ಲಿ ಹೆಚ್ಚು ಜನ ಬರುವ ನಿರೀಕ್ಷೆಯಿದ್ದು ಕಳೆದ ಬಾರಿಗಿಂತ ನಾಲ್ಕು ಲಕ್ಷ ಹೆಚ್ಚು ಭಕ್ತರು ಆಗಮಿಸುವುದರೊಂದಿಗೆ ಸುಮಾರು 20 ಲಕ್ಷ ಭಕ್ತರ ಆಗಮನ ನಿರೀಕ್ಷೆ ಹೊಂದಲಾಗಿದೆ ಎಂದು ಸಚಿವರು ಹೇಳಿದರು.

ದರ್ಶನೋತ್ಸವ ಪ್ರಾರಂಭವಾಗುವ ಅಕ್ಟೋಬರ್ 24ರಂದು ಶ್ರೀ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟನೆ ನೆರವೇರಿಸಲಿರುವವರು ಎಲ್ಲಾ ಜನಪ್ರತಿನಿಧಿಗಳ ಸಮ್ಮುಖದಲ್ಲಿ ದೇವರ ಬಾಗಿಲನ್ನು ತೆರೆಯಲಾಗುವುದು ಎಂದು ತಿಳಿಸಿದರು .

ಭಕ್ತಾಧಿಗಳು ದೇವಿ ದರ್ಶನ ಪಡೆದು ಸಂತೃಪ್ತರಾಗಿ ಧನ್ಯ ಮನೋಭವದಿಂದ ತೆರಳುವಂತೆ ಕ್ರಮವಹಿಸಬೇಕು ದೇವಸ್ಥಾನದ ಜಾತ್ರಾಮಹತ್ಸೋವದಲ್ಲಿ ಎಲ್ಲಾ ಅಧಿಕಾರಿಗಳು ಸಕ್ರೀಯವಾಗಿ ತೊಡಗಿಸಿಕೊಂಡು ಜವಾಬ್ಬಾರಿಯಿಂದ ಕರ್ತವ್ಯ ನಿರ್ವಹಿಸುವುದರ ಮೂಲಕ ಯಶಸ್ವಿಗೊಳಿಸುವಂತೆ ಸಚಿವರು ತಿಳಿಸಿದರು.

ಮೈಸೂರು ದಸರಾದಂತೆ ವಿದ್ಯುತ್ ಅಲಂಕಾರ, ಹೂವಿನ ಅಲಂಕಾರಕ್ಕೆ ಕ್ರಮವಹಿಸಿ ಸಣ್ಣ ಪುಟ್ಟ ಲೋಪದೋಷಗಳು ಆಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಬೇಲೂರು-ಹಳೇಬೀಡಿನಲ್ಲಿ ಯಾತ್ರಿಕರಿಗೆ ಅನುಕೂಲವಾಗುವಂತೆ ಶೌಚಾಲಯ ವ್ಯವಸ್ಧೆಗೆ ಕ್ರಮವಹಿಸಲು ಸೂಚಿಸಿದರು.

ಫಲ ಪುಷ್ಪ ಪ್ರದರ್ಶನವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಲು ಅಗತ್ಯ ಸಿದ್ದತೆಗೆ ಕ್ರಮವಹಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ ಹೆಚ್ಚಿನ ಪ್ರಚಾರ ನೀಡಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಫಲಪುಷ್ಪ ಪ್ರದರ್ಶನವನ್ನು ವೀಕ್ಷಣೆ ಮಾಡುವಂತೆ ಕ್ರಮವಹಿಸಿ ಎಂದು ತಿಳಿಸಿದರು.

ವಿದ್ಯುತ್ ಅಲಂಕಾರ, ಹೂವಿನ ಅಲಂಕಾರ, ಸ್ವಾಗತ ಕಮಾನು, ಸಂಚಾರ ನಿಯಂತ್ರಣ, ಶೌಚಾಲಯ ನಿರ್ಮಾಣ, ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಉಪ ವಿಭಾಗಾಧಿಕಾರಿ ಮಾರುತಿ ಮಾಹಿತಿ ನೀಡಿದರು. ಹೂವಿನ ಅಲಂಕಾರಕ್ಕೆ ಈ ಬಾರಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಪುಷ್ಪಲಂಕಾರ ಆಯೋಜನೆ ಮಾಡುವ ಆಯೋಜಕರಿಗೆ ನೇಮಿಸಲಾಗಿದ್ದು ,ಈ ಬಾರಿ 80 ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ .ವಿದ್ಯುತ್ ಅಲಂಕಾರಕ್ಕೆ ದಸರಾ ಮಾದರಿ ದೀಪಾಲಂಕಾರ ಮಾಡಲು ಟೆಂಡರ್ ಕರೆಯಲಾಗಿದೆ. ವಿಶೇಷವಾಗಿ ಅಂಡರ್ ಗ್ರೌಂಡ್ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿ ಪ್ರಗತಿಯಲ್ಲಿದ್ದು ಕೆಲದಿನಗಳಲ್ಲಿ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದು ಹೇಳಿದರು.

ವಿಶೇಷ ದರ್ಶನ ಟಿಕೆಟ್ ಗೆ ಲಾಡು ಪ್ರಸಾದ :ಇಸ್ಕಾನ್ ಉಸ್ತವಾರಿ ಈ ಬಾರಿ 1000 ಹಾಗೂ 300ರೂಗಳ ವಿಶೇಷ ದರ್ಶನದ ಪಾಸ್ ಗಳಿಗೆ ಲಾಡು ಪ್ರಸಾದ ನೀಡುವ ಕುರಿತು ತಿರ್ಮಾನಿಸಿ , ವಿಶೇಷ ದರ್ಶನದ 1000ರೂ ಪಾಸಿಗೆ ಎರಡು ಹಾಗೂ 300 ರೂ ಪಾಸ್‌ಗೆ ಒಂದು ಲಾಡನ್ನು ನೀಡಲು ನಿರ್ಧರಿಸಲಾಗಿದೆ. ವಿಶೇಷವಾಗಿ ಈ ಬಾರಿ ಇಸ್ಕಾನ್ ಸಂಸ್ಥೆಯಿAದ ಲಾಡು ಪ್ರಸಾದ ತಯಾರಿಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ದರ್ಶನೋತ್ಸವಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ದೊನ್ನೆ ಪ್ರಸಾದ ವಿತರಣೆ ಆಗಲಿದ್ದು ಪ್ರತಿ ಮೂರು ಗಂಟೆಗೆ ಒಮ್ಮೆ ಪ್ರಸಾದ ಬದಲಿಸಲಾಗುವುದು ಪುಳಿಯೋಗರೆ ಪಲಾವ್ ಪೊಂಗಲ್ ಸೇರಿದಂತೆ ನಾನ ಬಗೆಯ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಭೆಗೆ ಮಾರುತಿ ತಿಳಿಸಿದರು .

ಸರ್ಕಾರಿ ನೌಕರರು, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ ಸೇರಿದಂತೆ ಇತರರಿಗೆ ದಿನನಿತ್ಯದ ಊಟ ಹಾಗೂ ಉಪಹಾರದ ವ್ಯವಸ್ಥೆಯನ್ನು ಎಂದಿನAತೆ ಮಾಡಲಾಗುವುದು ಈ ಬಾರಿ ಸ್ಕೌಟ್ಸ್ ಮತ್ತು ಗೈಡ್ಸ್ ಎನ್ ಸಿ ಸಿ ಸ್ವಯಂಸೇವಕರಿಗೆ ರಾತ್ರಿ ತಂಗಲು ವಸತಿ ಹಾಗೂ ಅಗತ್ಯ ಬೆಡ್ ಗಳ ವ್ಯವಸ್ಥೆ ಕೈಗೊಳ್ಳಲು ಸಚಿವರು ಸೂಚನೆ ನೀಡಿದರು.

ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಗಣ್ಯರು ಆಗಮಿಸಲು ಒನ್ ವೇ ರೋಡ್ ಮ್ಯಾಪ್ ಸಿದ್ಧಪಡಿಸಿದ್ದು ಈ ಮಾರ್ಗದಲ್ಲಿ ಕೇವಲ ಸಿಎಂ ಸೇರಿದಂತೆ ಅತಿ ಗಣ್ಯರ ಆಗಮನ ಹಾಗೂ ನಿರ್ಗಮನಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸತ್ಯಭಾಮ ಸಭೆಯಲ್ಲಿ ಮಾಹಿತಿ ನೀಡಿದರು.

ಈ ಬಾರಿಯೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದರ್ಶನೋತ್ಸವಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಶೌಚಾಲಯ ವ್ಯವಸ್ಥೆ ,ಜರ್ಮನ್ ಟೆಂಟ್, ನೆಲಹಾಸು ಸೇರಿದಂತೆ ನಿಗದಿತ ಸ್ಥಳಗಳಲ್ಲಿ ಗೇಟ್‌ಗಳನ್ನು ಅಳವಡಿಸಲಾಗುವುದು, ಇಲ್ಲಿ ಪೊಲೀಸ್ ಕಂದಾಯ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ನಿಯೋಜಿಸಿ ಸೂಕ್ತವಾಗಿ ನಿರ್ವಹಣೆಯನ್ನು ಕೈಗೊಳ್ಳಲಾಗುವುದು ಈಗಾಗಲೇ ಈ ಸಂಬAಧ ಟೆಂಡರ್ ಕರೆಯಲಾಗಿದೆ ಎಂದು ಮಾರುತಿ ಸಭೆಗೆ ಮಾಹಿತಿ ನೀಡಿದರು.

ಸಿಬ್ಬಂದಿಗಳಿಗೆ ಈ ಬಾರಿ ವಾಕಿಟಾಕಿಗಳನ್ನು ಬಳಸಿಕೊಂಡು ದೇವಾಲಯದ ಸುತ್ತ ಹಾಗೂ ಪ್ರವೇಶ ದ್ವಾರಗಳ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು 144 ಸಿಸಿ ಕ್ಯಾಮೆರಾ ಅಳವಡಿಕೆ ಮಾಡುವ ಕುರಿತು ಚರ್ಚೆ ನಡೆದಿದೆ ಪ್ರತ್ಯೇಕ ವಾರ್ ರೂಮ್‌ಗಳನ್ನು ತೆರೆಯಲು ಕ್ರಮವಹಿಸಲಾಗಿದೆ ಎಂದರು.

ಸರತಿ ಸಾಲಿನಲ್ಲಿ ಹಾಗೂ ದೇವಾಲಯದ ಆವರಣದಲ್ಲಿ ತಾಸುಗಟ್ಟಲೆ ನಿಲ್ಲುವ ಭಕ್ತಾದಿಗಳಿಗೆ ನೀರು ಹಾಗೂ ಮಜ್ಜಿಗೆ ಪೂರೈಕೆಯನ್ನು ಈ ಬಾರಿಯೂ ವ್ತವಸ್ಥೆ ಮಾಡಲಾಗುವುದು ಇದಕ್ಕಾಗಿ ಖಾಸಗಿ ಕಂಪನಿಗಳಿಗೆ 3000 ಲೀಟರ್ ನೀರು ಪೂರೈಸಲು ಹಾಗೂ ಸ್ಥಳೀಯ ಕೆಎಂಎಫ್ ಡೈರಿಯಲ್ಲಿ ಮಜ್ಜಿಗೆ ಪೂರೈಕೆಗೆ ಟೆಂಡರ್ ಕರೆಯಲಾಗಿದೆ. ಭಕ್ತಾದಿಗಳು ಸಾಗುವ ಮಾರ್ಗದಲ್ಲಿ ನೆರದರ್ಶನ ವ್ಯವಸ್ಥೆಗೆ ಎಲ್ಇಡಿ ಪರದೆ ಅಳವಡಿಸಲಾಗುತ್ತಿದೆ. ಈ ಮೂಲಕ ದೇವಿಯ ಪೂಜೆಯ ನೇರ ಪ್ರಸಾರವನ್ನು ಮಾಡಲಾಗುತ್ತಿದೆ ಎಂದರು.

ಪೂಜಾ ಅವಧಿ ಕಡಿತಕ್ಕೆ ಮನವಿ: ಈ ಬಾರಿ ದರ್ಶನೋತ್ಸವ ಕೇವಲ ಒಂಬತ್ತು ದಿನ ಮಾತ್ರ ದಿನದ 24 ಗಂಟೆ ದರ್ಶನಕ್ಕೆ ಅವಕಾಶ ಇರುವುದರಿಂದ ಧಾರ್ಮಿಕ ವಿಧಿ ವಿಧಾನಕ್ಕೆ ಧಕ್ಕೆ ಆಗದಂತೆ ಪೂಜೆ ಸಮಯ ಕಡಿತ ಮಾಡುವಂತೆ ಅರ್ಚಕರಿಗೆ ಕೂರಲಾಗುವುದು. ಇದರಿಂದ ಒಂಬತ್ತು ದಿನದಲ್ಲಿ ದಿನಂಪ್ರತಿ ಎರಡು ಗಂಟೆ ಸಮಯ ಉಳಿದರು 18 ಗಂಟೆ ಹೆಚ್ಚುವರಿ ಸಮಯ ಭಕ್ತರಿಗೆ ದರ್ಶನದ ಅವಕಾಶ ಕಲ್ಪಿಸಿದಂತಾಗುತ್ತದೆ. ಕೊನೆಯ ದಿನ ಕೆಲಕಾಲ ಸ್ಥಳೀಯ ಹಾಗೂ ಇತರೆ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲು ಸಚಿವರು ಸಲಹೆ ನೀಡಿದರು.

ಈ ಬಾರಿಯೂ ಇರಲ್ಲಿದೆ ಟೂರ್ ಪ್ಯಾಕೇಜ್ :ಹೆಲಿ ಟೂರಿಸಂ ಕಳೆದ ಬಾರಿ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳ ಮೂಲಕ ಪ್ರವಾಸದ ಪ್ಯಾಕೇಜ್ ಅನ್ನು ಪರಿಚಯಿಸಲಾಗಿತ್ತು ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಬಾರಿಯೂ ಅದೇ ರೀತಿ ಪ್ಯಾಕೇಜ್ ಟೂರ್ ಅನ್ನು ಪರಿಚಯಿಸಲಾಗುವುದು ಎಂದು ಜಿಲ್ಲಾಧಿಕಾರಿ ಸತ್ಯಭಾಮ ಹೇಳಿದರು.

ಹೆಲಿಕಾಪ್ಟರ್ ಮೂಲಕ ಹಾಸನ ನಗರ ಹಾಗೂ ಹಾಸನಾಂಬ ದೇವಾಲಯ ಸುತ್ತ ಪ್ರಯಾಣ ಮಾಡಲು ಈ ಬಾರಿಯೂ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಸತ್ಯಭಾಮ ಹೇಳಿದರು.

ಪ್ಯಾರಾ ಗ್ಲೈಡಿಂಗ್, ಪ್ಯಾರ ಸೇಲಿಂಗ್ ಸಹ ಇರಲಿದ್ದು ನಗರದ ಸಮೀಪದಲ್ಲಿ ಈ ಬಾರಿ ವ್ಯವಸ್ಥೆ ಕಲ್ಪಿಸುವು ದರಿಂದ ಹೆಚ್ಚಿನ ಜನರಿಗೆ ಇದರ ಉಪಯೋಗ ಆಗಲಿದೆ ಎಂದು ಸಭೆಯಲ್ಲಿ ತಿಳಿಸಿದರು.

ಶಾಸಕ ಸ್ವರೂಪ್ ಪ್ರಕಾಶ್ ಮಾತನಾಡಿ,ಈ ಬಾರಿ ಹಾಸನಾಂಬ ದರ್ಶನೋತ್ಸವ ಹಿನ್ನಲೆಯಲ್ಲಿ ಡೈರಿ ವೃತ್ತದಿಂದ ದೇವಾಲಯದವರೆಗೆ ಇರುವ ಸರ್ಕಾರಿ ಕಚೇರಿಗಳ ಕಾಂಪೌAಡ್‌ಗಳಿಗೆ ಪೇಯಿಂಟ್ ಮಾಡಿಸಲು ನಗರಸಭೆಯ ಮೂಲಕ ಟೆಂಡರ್ ಕರೆಯುವಂತೆ ಸಲಹೆ ನೀಡಿದರು.

ಸಂಸದ ಶ್ರೇಯಸ್ ಪಟೇಲ್, ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕರಾದ ಕೆ.ಎಂ ಶಿವಲಿಂಗೇಗೌಡ, ನಗರಸಭೆ ಅಧ್ಯಕ್ಷ ಚಂದ್ರೇಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಮತ್ತಿತರ ಅಧಿಕಾರಿಗಳು ಹಾಜರಿದ್ದರು.

‘ದ್ವಿತೀಯ PUC ಪರೀಕ್ಷೆ-1’ಕ್ಕೆ ನೋಂದಣಿಗೆ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ | Karnataka Second PUC Exam

ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ಸುರಕ್ಷತೆಗೆ ಮಹತ್ವದ ಹೆಜ್ಜೆ: 10,000 ರೈಲುಗಳಿಗೆ ಕವಚ್ 4.0 ಅಳವಡಿಕೆ

Share. Facebook Twitter LinkedIn WhatsApp Email

Related Posts

BREAKING : ಕೊಪ್ಪಳದಲ್ಲಿ ಘೋರ ದುರಂತ : ಲಾರಿಯಿಂದ ಪೈಪ್ ಇಳಿಸುವಾಗ ಮೂವರು ಕಾರ್ಮಿಕರು ಸಾವು!

22/05/2025 4:20 PM1 Min Read

ಪರಮೇಶ್ವರ್ ಪ್ರಾಮಾಣಿಕರು, ಯಾವುದೇ ತಪ್ಪು ಮಾಡಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

22/05/2025 4:17 PM1 Min Read

ಬೆಂಗಳೂರಲ್ಲಿ ಮಳೆಯಿಂದಾಗುತ್ತಿರುವ ಸಮಸ್ಯೆ ನಿವಾರಣೆ ನಮ್ಮ ಜವಾಬ್ದಾರಿ: ಡಿಸಿಎಂ ಡಿ.ಕೆ ಶಿವಕುಮಾರ್

22/05/2025 4:15 PM2 Mins Read
Recent News

BREAKING : ಕೊಪ್ಪಳದಲ್ಲಿ ಘೋರ ದುರಂತ : ಲಾರಿಯಿಂದ ಪೈಪ್ ಇಳಿಸುವಾಗ ಮೂವರು ಕಾರ್ಮಿಕರು ಸಾವು!

22/05/2025 4:20 PM

ಪರಮೇಶ್ವರ್ ಪ್ರಾಮಾಣಿಕರು, ಯಾವುದೇ ತಪ್ಪು ಮಾಡಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

22/05/2025 4:17 PM

ಬೆಂಗಳೂರಲ್ಲಿ ಮಳೆಯಿಂದಾಗುತ್ತಿರುವ ಸಮಸ್ಯೆ ನಿವಾರಣೆ ನಮ್ಮ ಜವಾಬ್ದಾರಿ: ಡಿಸಿಎಂ ಡಿ.ಕೆ ಶಿವಕುಮಾರ್

22/05/2025 4:15 PM

BIG NEWS: ಅತ್ಯಾಚಾರ, ಎರಡು ಬಾರಿ ಪ್ರಗ್ನೆಂಟ್, ಅಬಾಷನ್: ಕಲಾವಿದ ಮನು ಕರಾಳ ಮುಖ ಬಿಚ್ಚಿಟ್ಟ ಸಂತ್ರಸ್ತೆ | Madenuru Manu

22/05/2025 4:11 PM
State News
KARNATAKA

BREAKING : ಕೊಪ್ಪಳದಲ್ಲಿ ಘೋರ ದುರಂತ : ಲಾರಿಯಿಂದ ಪೈಪ್ ಇಳಿಸುವಾಗ ಮೂವರು ಕಾರ್ಮಿಕರು ಸಾವು!

By kannadanewsnow0522/05/2025 4:20 PM KARNATAKA 1 Min Read

ಕೊಪ್ಪಳ : ಕೊಪ್ಪಳದಲ್ಲಿ ಇಂದು ಘೋರವಾದ ದುರಂತವೊಂದು ಸಂಭವಿಸಿದ್ದು, ಲಾರಿಯಿಂದ ಪೈಪ್ ಇಳಿಸುವಾಗ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಕೊಪ್ಪಳ…

ಪರಮೇಶ್ವರ್ ಪ್ರಾಮಾಣಿಕರು, ಯಾವುದೇ ತಪ್ಪು ಮಾಡಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

22/05/2025 4:17 PM

ಬೆಂಗಳೂರಲ್ಲಿ ಮಳೆಯಿಂದಾಗುತ್ತಿರುವ ಸಮಸ್ಯೆ ನಿವಾರಣೆ ನಮ್ಮ ಜವಾಬ್ದಾರಿ: ಡಿಸಿಎಂ ಡಿ.ಕೆ ಶಿವಕುಮಾರ್

22/05/2025 4:15 PM

BIG NEWS: ಅತ್ಯಾಚಾರ, ಎರಡು ಬಾರಿ ಪ್ರಗ್ನೆಂಟ್, ಅಬಾಷನ್: ಕಲಾವಿದ ಮನು ಕರಾಳ ಮುಖ ಬಿಚ್ಚಿಟ್ಟ ಸಂತ್ರಸ್ತೆ | Madenuru Manu

22/05/2025 4:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.