ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆಂದು ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ. ಆದರೆ ಇದೀಗ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅವರು ಸಿಎಂ ಸಿದ್ದರಾಮಯ್ಯ ಯಾವ ಕಾರಣಕ್ಕೆ ರಾಜೀನಾಮೆ ಕೊಡಬೇಕು ಎಂದು ಹೇಳುವ ಮೂಲಕ ಸಿಎಂ ಪರ ಬ್ಯಾಟ್ ಬೀಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಯಾವ ಕಾರಣಕ್ಕೆ ರಾಜೀನಾಮೆ ಕೊಡಬೇಕು. ಬಿಜೆಪಿ ಯಾವತ್ತಾದರೂ ಅಭಿವೃದ್ಧಿ ಬಗ್ಗೆ ಮಾತನಾಡುತ್ತದೆಯೇ? ಮುಡಾ ಕೇವಲ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ದಾಳಿ, ಸಿಎಂ ಸಿದ್ದರಾಮಯ್ಯ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿಲ್ಲ. ಪತ್ನಿಗೆ ಕಿರಿಕಿರಿ ಆಗಿದೆ ಅಂತ ಸೈಟ್ ವಾಪಸ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.