ಮೈಸೂರು : ಮುಡಾ ಸೈಟ್ ವಾಪಸ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮುಡಾ ಆಯುಕ್ತರಿಗೆ 14 ನಿವೇಶನಗಳನ್ನು ವಾಪಸ್ ಮಾಡುತ್ತಿದ್ದೇನೆ ಎಂದು ಪತ್ರ ಬರೆದಿದ್ದರು. ಹಾಗಾಗಿ ಇದೀಗ 14 ನಿವೇಶನಗಳನ್ನು ಇದೀಗ ರದ್ದು ಮಾಡಲಾಗಿದೆ.
ಹೌದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರೇ ಸಬ್ ರಿಜಿಸ್ಟರ್ ಕಚೇರಿಗೆ ಬಂದು 14 ನಿವೇಶನಗಳ ಖಾತೆಯನ್ನು ರದ್ದು ಪಡಿಸಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ನಿನ್ನೆ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ 14 ನಿವೇಶನಗಳನ್ನು ಹಿಂತಿರುಗಿಸುತ್ತಿದ್ದೇನೆ ಎಂದು ಮುಡಾ ಆಯುಕ್ತರಿಗೆ ಪತ್ರದ ಮೂಲಕ ತಿಳಿಸಿದ್ದರು. ಇದೀಗ ಇಂದು ಖುದ್ದು ಅವರೇ ಸಬ್ ರಿಜಿಸ್ಟರ್ ಕಚೇರಿಗೆ ಹಾಜರಾಗಿ 14 ನಿಮಿಷಗಳ ಖಾತೆ ರದ್ದುಗೊಳಿಸಿದ್ದಾರೆ.