ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಇಡಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಇಸಿಐಆರ್ ಕೂಡ ದಾಖಲಿಸಲಾಗಿತ್ತು. ಈ ಪ್ರಕರಣ ಸಂಬಂಧ ಸೂಕ್ತ ದಾಖಲೆಗಳನ್ನು ಸಲ್ಲಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಇಡಿ ಸಮನ್ಸ್ ಜಾರಿಗೊಳಿಸಿದೆ.
ಇಂದು ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧ ದೂರು ನೀಡಿದ್ದಂತ ದೂರು ದಾಖಲಿಸಿದ್ದಂತ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಇಡಿ ಸಮನ್ಸ್ ಜಾರಿಗೊಳಿಸಿದೆ. ಅದರಲ್ಲಿ ಅಕ್ಟೋಬರ್.3ರಂದು ಬೆಳಿಗ್ಗೆ 11 ಗಂಟೆ ಒಳಗಾಗಿ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಸಾಕ್ಷ್ಯಾಧಾರ, ದಾಖಲೆಗಳನ್ನು ಇ-ಮೇಲ್ ಮೂಲಕ ಸಲ್ಲಿಸುವಂತೆ ಸೂಚಿಸಿದೆ.
ಅಂದಹಾಗೇ ಮುಡಾದಿಂದ ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿಗೆ ನೀಡಲಾಗಿದ್ದಂತ 14 ಸೈಟ್ ಗಳನ್ನು ಅವರು ಹಿಂದಿರುಗಿಸಿದ್ದರು. ಈ ಬೆನ್ನಲ್ಲೇ ಕಂದಾಯ ಇಲಾಖೆಯಿಂದ ಕ್ರಯಪತ್ರವನ್ನು ರದ್ದುಗೊಳಿಸಲಾಗಿತ್ತು. ಆ ಬಳಿಕ ಮುಡಾಗೆ ಸೈಟ್ ಗಳನ್ನು ವಾಪಾಸ್ ನೀಡಲಾಗಿತ್ತು. ಈ ಕೇಸ್ ಸಂಬಂಧ ಇಡಿ ಸ್ನೇಹಮಯಿ ಕೃಷ್ಣಗೆ ಸಮನ್ಸ್ ಜಾರಿಗೊಳಿಸಿ, ದಾಖಲೆ, ಸಾಕ್ಷ್ಯಾಧಾರ ಸಲ್ಲಿಸುವಂತೆ ತಿಳಿಸಿದೆ.
384 KAS ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಡೇಟ್ ಫಿಕ್ಸ್: ಡಿ.29ಕ್ಕೆ ಎಕ್ಸಾಂ | KAS Exam