ಬೆಂಗಳೂರು: ಮೈಸೂರು ದಸರಾ ಉದ್ಘಾಟನಾ ಸಂದರ್ಭದಲ್ಲಿ ಪ್ರತಿ ವರ್ಷವೂ ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡುವುದು ಸಂಪ್ರದಾಯ. ಅದರಂತೆ ಈ ವರ್ಷ ಈ ಪ್ರತಿಷ್ಠಿತ ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್ ತಂಗಡಗಿ ಹೇಳಿದ್ದಾರೆ.
ಪಂಡಿತ್ ಎಂ . ವೆಂಕಟೇಶ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಆಯ್ಕೆ ಸಮಿತಿ ಇವರನ್ನು ಆಯ್ಕೆ ಮಾಡಿದೆ. ನಾಳೆ ಸಂಜೆ ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪಂಡಿತ್ ಬಸವರಾಜ ಭಜಂತ್ರಿ ಅವರಿಗೆ ಪ್ರದಾನ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.
ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಪ್ರಶಸ್ತಿಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋದರೂ, ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು: CM ಬಣ್ಣನೆ
ಗಮನಿಸಿ : ಆಧಾರ್ ಕಾರ್ಡ್‌ನಲ್ಲಿ `ವಿಳಾಸ’ವನ್ನು ಎಷ್ಟು ಬಾರಿ ಬದಲಾಯಿಸಬಹುದು! ಇಲ್ಲಿದೆ ಮಾಹಿತಿ