ಬೆಂಗಳೂರು: ಮುಡಾ ಹಗರಣದ ಸಂಕಷ್ಟದಲ್ಲಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಈಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಅದೇ ರಾಷ್ಟ್ರಧ್ವಜ ಹಿಡಿದಿದ್ದಂತ ಕಾಂಗ್ರೆಸ್ ಕಾರ್ಯಕರ್ತನೊಬ್ಬನಿಂದ ತಮ್ಮ ಶೂ ಲೇಸ್ ಕಟ್ಟಿಸಿಕೊಂಡು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಗುಲಾಮಗಿರಿಯ ದವಡೆಯಿಂದ ಮುಕ್ತವಾದ ಭಾರತ, ಇಂದು ವಿಶ್ವದ ಮುಂಚೂಣಿ ರಾಷ್ಟ್ರವಾಗಿದೆ. ರಾಷ್ಟ್ರಭಕ್ತಿ, ರಾಷ್ಟ್ರಧ್ವಜ, ರಾಷ್ಟ್ರ ಭಕ್ತರು ಎಂದರೆ ಕಾಂಗ್ರೆಸ್’ಗೆ ಯಾವಾಗಲೂ ಕಾಲ ಕಸ ಎಂಬುದಾಗಿ ಕಿಡಿಕಾರಿದ್ದಾರೆ.
ಗುಲಾಮಗಿರಿಯನ್ನು ಆರಾಧಿಸಿಕೊಂಡು ಬಂದ ಕಾಂಗ್ರೆಸ್ಸಿಗರು ರಾಷ್ಟ್ರಧ್ವಜವನ್ನು ಗಾಂಧಿ ಜಯಂತಿಯಂದೇ ಗುಲಾಮಗಿರಿಯ ಸಂಕೇತದಂತೆ ಕಾಲಕಸವಾಗಿ ಕಂಡಿರುವುದು, ಸ್ವತಃ ಮುಖ್ಯಮಂತ್ರಿಗಳು ಅದನ್ನು ಆಕ್ಷೇಪಿಸದೆ ಉತ್ತೇಜಿಸುವ ಮಾದರಿಯಲ್ಲಿ ಉಡಾಫೆ ಪ್ರದರ್ಶಿಸಿರುವುದು ರಾಷ್ಟ್ರ ಹಾಗೂ ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನವಾಗಿದೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ.
ಈ ಕೂಡಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್ ಭಾರತೀಯರ ಕ್ಷಮೆ ಕೇಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಗುಲಾಮಗಿರಿಯ ದವಡೆಯಿಂದ ಮುಕ್ತವಾದ ಭಾರತ, ಇಂದು ವಿಶ್ವದ ಮುಂಚೂಣಿ ರಾಷ್ಟ್ರವಾಗಿದೆ. ರಾಷ್ಟ್ರಭಕ್ತಿ, ರಾಷ್ಟ್ರಧ್ವಜ, ರಾಷ್ಟ್ರ ಭಕ್ತರು ಎಂದರೆ ಕಾಂಗ್ರೆಸ್'ಗೆ ಯಾವಾಗಲೂ ಕಾಲ ಕಸ.
ಗುಲಾಮಗಿರಿಯನ್ನು ಆರಾಧಿಸಿಕೊಂಡು ಬಂದ ಕಾಂಗ್ರೆಸ್ಸಿಗರು ರಾಷ್ಟ್ರಧ್ವಜವನ್ನು ಗಾಂಧಿ ಜಯಂತಿಯಂದೇ ಗುಲಾಮಗಿರಿಯ ಸಂಕೇತದಂತೆ ಕಾಲಕಸವಾಗಿ ಕಂಡಿರುವುದು, ಸ್ವತಃ… pic.twitter.com/8OXQVE0yJz
— Vijayendra Yediyurappa (@BYVijayendra) October 2, 2024
ಗಮನಿಸಿ : ಆಧಾರ್ ಕಾರ್ಡ್‌ನಲ್ಲಿ `ವಿಳಾಸ’ವನ್ನು ಎಷ್ಟು ಬಾರಿ ಬದಲಾಯಿಸಬಹುದು! ಇಲ್ಲಿದೆ ಮಾಹಿತಿ
ಸರ್ವ ಜನಾಂಗದ ಶಾಂತಿಯ ತೋಟದ ನಾಯಕ ಗಾಂಧೀಜಿ: ಡಿಸಿಎಂ ಡಿ.ಕೆ.ಶಿವಕುಮಾರ್