ದಾವಣಗೆರೆ : ಇತ್ತೀಚಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಒಟ್ಟು ನಾಲ್ವರು ವಿದೇಶಿಗರನ್ನು ಪೊಲೀಸರು ಬಂಧಿಸಿದ್ದರು. ಇದೀಗ ದಾವಣಗೆರೆಯಲ್ಲೂ ಕೂಡ ನಾಲ್ವರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅವರ ಹಿನ್ನೆಲೆ ತಿಳಿದುಕೊಂಡು ಸ್ವತಃ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.
ಹೌದು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಿದ್ದಿಕಿ ಮೊಹಮ್ಮದ್ ಯಾಸಿನ್ (ಮಗ), ಜೈನಾಬಿ ನೂರ್ (ಸೊಸೆ), ಫಾತಿಮಾ (ಮಗಳು), ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದು, ಅಲ್ತಾಫ್ ಪತ್ನಿ ಫಾತಿಮಾ ಪಾಕಿಸ್ತಾನ ಪ್ರಜೆಯಾಗಿದ್ದಾಳೆ ಎಂದು ತಿಳಿದುಬಂದಿದೆ.
ಹಿಂದೂಗಳ ಹೆಸರಲ್ಲಿ ವಾಸ!
ನಾಲ್ವರು ಪಾಕಿಸ್ತಾನಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಬೆಚ್ಚಿ ಬೀಳಿಸುವಂತಹ ಮಾಹಿತಿ ಬಹಿರಂಗವಾಗಿದೆ. ಈ ನಾಲ್ವರು ಹಿಂದೂಗಳ ಹೆಸರುಗಳನ್ನು ಇಟ್ಟುಕೊಂಡು ಹಲವು ವರ್ಷಗಳಿಂದ ಈ ಒಂದು ಬಡಾವಣೆಯಲ್ಲಿ ವಾಸಿಸುತ್ತಿದ್ದರು ಎನ್ನುವ ಆತಂಕಕಾರಿ ವಿಷಯ ತಿಳಿದುಬಂದಿದೆ.
ಪಾಕಿಸ್ತಾನ ಮೂಲದ ಮಹಿಳೆ ಫಾತಿಮಾ ದಾವಣಗೆರೆಯ ಅಲ್ತಾಫ್ ನನ್ನು ವಿವಾಹವಾಗಿದ್ದಳು.ಮೊಹಮ್ಮದ್ ಹನೀಫ್ ಕೂಡ ಪಾಕಿಸ್ತಾನದವನಾಗಿದ್ದಾನೆ. ಹನೀಫ್ ಸೊಸೆ, ಮಗಳು, ಅಳಿಯನನ್ನೂ ಬಂಧಿಸಲಾಗಿದೆ. ರಶೀದ್ ಅಲಿ ಸಿದ್ದಿಕಿ ಎಂಬಾತನ ಮಾವ ಮೊಹಮ್ಮದ್ ಹನೀಫ್ ಬೆಂಗಳೂರಿನಲ್ಲಿ ಸೆರೆ ಸಿಕ್ಕಿರುವ ಪ್ರಮುಖ ಆರೋಪಿ.
ಬೆಂಗಳೂರಿನ ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳು ಬಂಧನವಾಗಿರುವ ಸಂಬಂಧ ಹೆಚ್ಚಿನ ತನಿಖೆಗಾಗಿ ಪೊಲೀಸರ 4 ತಂಡಗಳ ರಚನೆ ಮಾಡಲಾಗಿದೆ. ಡಿವೈಎಸ್ಪಿ ಮೋಹನ್ಕುಮಾರ್ ನೇತೃತ್ವದಲ್ಲಿ 4 ತಂಡಗಳನ್ನು ರಚಿಸಲಾಗಿದೆ.ಪಾಕಿಸ್ತಾನ ಪ್ರಜೆಗಳಿಗೆ ನಕಲಿ ಆಧಾರ್ ಮಾಡಿಕೊಟ್ಟವರು ಯಾರು? ಹೇಗೆ ನುಸುಳಿದರು ಎಂಬುದರ ಕುರಿತು ಭಾರತೀಯ ದಾಖಲಾತಿಗಳನ್ನು ಮಾಡಿಕೊಟ್ಟವರಿಗೆ ಬಲೆ ಬೀಸಲಾಗಿದೆ.