ಬೆಂಗಳೂರು: ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ಹಿರಿಯ ನಾಗರಿಕರಿಗೆ ಮಾಸಾಶನ (ವೃದ್ಧಾಪ್ಯ ವೇತನ) ನೀಡಲಾಗುತ್ತಿದೆ. ಅವರ ಮಾಸಾಶನ ಹೆಚ್ಚಳದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಹಿರಿಯ ನಾಗರೀಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಹಿರಿಯರು ಮಾಡಿದ ಸಾಮಾಜಿಕ ಕೊಡುಗೆಗಳನ್ನು ಸ್ಮರಿಸಬೇಕು. ಹಿರಿಯರ ನಾಗರಿಕರನ್ನು ಕೇವಲ ಗೌರವಿಸಲಷ್ಟೇ ಮೀಸಲಿರಿಸಬಾರದು, ಅವರ ಸಾಧನೆಗಳು ಯುವ ಸಮುದಾಯಕ್ಕೆ ಸ್ಪೂರ್ತಿಯಾಗಬೇಕು. ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಅದೇ ನಾವು ಸಮಾಜಕ್ಕೆ ಕೊಡುವ ದೊಡ್ಡ ಕೊಡುಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವೃದ್ಧಾಶ್ರಮಗಳು ಹೆಚ್ಚಾಗುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು, ಮನೆಗಳಲ್ಲಿ ಅನುಕೂಲಕರ ವಾತಾವರಣವಿದ್ದರೂ ವೃದ್ಧಾ ಶ್ರಮ ಸೇರುವುದು ಜಾಸ್ತಿಯಾಗುತ್ತಿದೆ. ಏಕೆಂದರೆ, ಮಕ್ಕಳು ವಿದೇಶದಲ್ಲಿ ನೆಲೆಸಿರುತ್ತಾರೆ. ಇದರಿಂದ ಹಿರಿಯರನ್ನು ವೃದ್ಧಾಶ್ರಮಕ್ಕೆ ಸೇರಿಸುವ ಪರಿಪಾಟ ನಡೆಯುತ್ತಿದೆ. ಇಂಥ ಸಂಸ್ಥೃತಿ ನಿಲ್ಲಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು.
ಅಶಕ್ತ, ದುರ್ಬಲ ವರ್ಗದವರಿಗೆ ಶಕ್ತಿತುಂಬುವ ಕೆಲಸವಾಗಬೇಕು. ಅವಕಾಶಗಳಿಂದ ವಂಚಿತರಾದವರಿಗೆ, ಆರ್ಥಿಕವಾಗಿ ದುರ್ಬಲರಾಗಿರುವ ಜನರಿಗೆ ಶಕ್ತಿ ತುಂಬುವಂಥ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.
ಸಾಧಕ ಹಿರಿಯ ನಾಗರಿಕರಿಗೆ ಪ್ರಶಸ್ತಿ
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ 6 ಮಂದಿ ಹಾಗೂ ಒಂದು ಸೇವಾ ಸಂಸ್ಥೆಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ 10 ಮಹಿಳೆಯರಿಗೆ ಪೌಷ್ಠಿಕಾಂಶ ಕಿಟ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು.
Good News: ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹಬ್ಬಾಳ್ಕರ್
ಗಮನಿಸಿ : ಆಧಾರ್ ಕಾರ್ಡ್ನಲ್ಲಿ `ವಿಳಾಸ’ವನ್ನು ಎಷ್ಟು ಬಾರಿ ಬದಲಾಯಿಸಬಹುದು! ಇಲ್ಲಿದೆ ಮಾಹಿತಿ