ಹುಬ್ಬಳ್ಳಿ: ನೈಋತ್ಯ ರೈಲ್ವೆ ಮತ್ತು ಹುಬ್ಬಳ್ಳಿ ವಿಭಾಗ ಇಂದು ಎಸ್.ಎಸ್.ಎಸ್. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸಿತು. ಇಂದು ನೈಋತ್ಯ ರೈಲ್ವೆ ವಲಯದಾದ್ಯಂತ 17 ಸೆಪ್ಟೆಂಬರ್ 2024 ರಿಂದ ಆರಂಭಿಸಲಾಗಿದ್ದ ಸ್ವಚ್ಛತಾ ಪಾಕ್ಷಿಕ ಅಭಿಯಾನದ ಕೊನೆಯ ದಿನವಾಗಿದ್ದು ಸ್ವಚ್ಛತಾ ಹಿ ಸೇವಾ ದಿನವಾಗಿಯೂ ಆಚರಿಸಲಾಯಿತು.
ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಅರವಿಂದ್ ಶ್ರೀವಾಸ್ತವ, ನೈಋತ್ಯ ರೈಲ್ವೆಯ ಅಪರ ಪ್ರಧಾನ ವ್ಯವಸ್ಥಾಪಕರಾದ ಕೆ.ಎಸ್. ಜೈನ್, ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಹರ್ಷ್ ಖರೆ ಹಾಗು ವಿಭಾಗದ ಪ್ರಧಾನ ಮುಖ್ಯಸ್ಥರು, ಎಸ್.ಎಸ್.ಎಸ್. ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜನರಲ್ ಮ್ಯಾನೇಜರ್ ಅರವಿಂದ ಶ್ರೀವಾಸ್ತವ ಮಾತನಾಡಿ, ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ನಡೆಸಲಾದ ಸ್ವಚ್ಛತಾ ಹಿ ಸೇವಾ (SHS) 2024 ಅಭಿಯಾನವು ದೇಶಾದ್ಯಂತ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಉತ್ತೇಜಿಸುತ್ತದೆ. ಅದರ 10 ನೇ ವಾರ್ಷಿಕೋತ್ಸವವನ್ನು ಆಚರಿಸುವ “ಸ್ವಚ್ಛ ಭಾರತ ಅಭಿಯಾನ” ಹೊಸ ಉದ್ದೇಶದೊಂದಿಗೆ ಪ್ರಾರಂಭಿಸಲಾಯಿತು, ‘ಸ್ವಭಾವ ಸ್ವಚ್ಛತೆ, ಸಂಸ್ಕಾರ ಸ್ವಚ್ಛತಾ’ ಎಂಬ ಥೀಮ್ ಅನ್ನು ಅಳವಡಿಸಿಕೊಳ್ಳಲಾಗಿದೆ. ಈ ಅಭಿಯಾನವು ಭಾರತದ ಎಲ್ಲಾ ನಾಗರಿಕರಲ್ಲಿ ಸ್ವಚ್ಛತೆಯ ಬಗ್ಗೆ ಸಾರ್ವಜನಿಕ ಅರಿವು ಮೂಡಿಸಲು ಮತ್ತು ಸಾಮಾಜಿಕ ಜವಾಬ್ದಾರಿಯ ಪ್ರಜ್ಞೆಯನ್ನು ಮೂಡಿಸುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದರು.
ಈ ಸಮಾರಂಭದಲ್ಲಿ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭರತನಾಟ್ಯ, ದೇಶಭಕ್ತಿ ಗೀತೆಗಳು, ಸಂಗೀತದ ತುಣುಕುಗಳನ್ನು ಪ್ರದರ್ಶಿಸಿ ಜಾಗೃತಿ ಮೂಡಿಸಿದರು. ಕೇಂದ್ರೀಯ ವಿದ್ಯಾಲಯ ನಂ.2 ಮತ್ತು ಫಾತಿಮಾ ಕಾಲೇಜಿನ ವಿದ್ಯಾರ್ಥಿಗಳು ‘ಸ್ವಭಾವ ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆ,’ ವಿಷಯದ ಕುರಿತು ಕಿರುನಾಟಕ ಪ್ರದರ್ಶಿಸಿದರು ಮತ್ತು ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಿದರು. ಸ್ವಚ್ಛತಾ ಹಿ ಸೇವಾ ಅಭಿಯಾನದ ಅಂಗವಾಗಿ ಸ್ವಚ್ಛತೆ ವಿಷಯವಾಗಿ ಏರ್ಪಡಿಸಿದ್ದ ಚಿತ್ರಕಲೆ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಪ್ರಧಾನ ವ್ಯವಸ್ಥಾಪಕರಾದ ಅರವಿಂದ್ ಶ್ರೀವಾಸ್ತವ ಮತ್ತು ಅಪರ ಪ್ರಧಾನ ವ್ಯವಸ್ಥಾಪಕರಾದ ಕೆ.ಎಸ್. ಜೈನ್ ಅವರು ಎಸ್‌ಎಸ್‌ಎಸ್ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ವಚ್ಛತೆ ಮತ್ತು ಏಕ-ಬಳಕೆಯ ಪ್ಲಾಸ್ಟಿಕ್ ನಿರ್ಮೂರ್ಲನೆ ಬಗ್ಗೆ ಜಾಗೃತಿ ಮೂಡಿಸಲು ಪ್ರಯಾಣಿಕರಿಗೆ ಸೆಣಬಿನ ಚೀಲಗಳನ್ನು ವಿತರಿಸಿದರು. ನಂತರ ಎಸ್‌ಎಸ್‌ಎಸ್ ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಆವರಣದಲ್ಲಿ ಹಿರಿಯ ಅಧಿಕಾರಿಗಳ ಜತೆ ಶ್ರಮದಾನದಲ್ಲಿ ಪಾಲ್ಗೊಂಡರು.
ಪದ್ಮರಾಜ ದಂಡಾವತಿ ಸೇರಿ ಐವರು ಪತ್ರಕರ್ತರಿಗೆ TSR: ಹೊನ್ನಾಪುರ ಸೇರಿ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ ಪ್ರದಾನ
ಗಮನಿಸಿ : ಆಧಾರ್ ಕಾರ್ಡ್‌ನಲ್ಲಿ `ವಿಳಾಸ’ವನ್ನು ಎಷ್ಟು ಬಾರಿ ಬದಲಾಯಿಸಬಹುದು! ಇಲ್ಲಿದೆ ಮಾಹಿತಿ