ಕೋಲಾರ : ಬುಲೆರೋ ವಾಹನಕ್ಕೆ ವೇಗವಾಗಿ ಬಂದಂತಹ ಕಂಟೇನರ್ ಬಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ಮಡೇರಹಳ್ಳಿ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಬೆಂಗಳೂರು ಮೂಲದ ವಿಜಯಕುಮಾರ್ ಎಂದು ಹೇಳಲಾಗುತ್ತಿದ್ದು, ಕಂಟೇನರ್ ಬಂದು ಡಿಕ್ಕಿ ಹೊಡೆದ ರಭಸಕ್ಕೆ ಬೋಲೇರೋ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.