Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ

15/04/2026 11:19 AM

BREAKING : ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

15/04/2026 11:10 AM

ಬೆಂಗಳೂರಿನಲ್ಲಿ ಭಾರೀ ಬಿಸಿಲು, ಇಂದು ತಾಪಮಾನ 37°C ದಾಟುವ ಸಾಧ್ಯತೆ : IMD ಎಚ್ಚರಿಕೆ

15/04/2026 11:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನಿಂದ ನಾಡಹಬ್ಬ `ಮೈಸೂರು ದಸರಾ’ ಮಹೋತ್ಸವ : ಮೊದಲ ದಿನದ ಕಾರ್ಯಕ್ರಮಗಳ ವಿವರ ಹೀಗಿದೆ..| Mysore Dasara 2024
KARNATAKA

ಇಂದಿನಿಂದ ನಾಡಹಬ್ಬ `ಮೈಸೂರು ದಸರಾ’ ಮಹೋತ್ಸವ : ಮೊದಲ ದಿನದ ಕಾರ್ಯಕ್ರಮಗಳ ವಿವರ ಹೀಗಿದೆ..| Mysore Dasara 2024

By kannadanewsnow5703/10/2024 7:52 AM

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಅಕ್ಟೋಬರ್ 3ರ ಇಂದು ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ.

ಬೆಳಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡುವರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ. ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ರಾಝ್ಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಕೆ. ವೆಂಕಟೇಶ್, ಶಿವರಾಜ್ ತಂಗಡಗಿ, ಹೆಚ್.ಕೆ.ಪಾಟೀಲ್, ರಾಮಲಿಂಗ ರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್ ಭಾಗವಹಿಸಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸುವರು.

ಇಂದು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಆಗುತ್ತದೆ. ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಸಿಎಂ ನೀಡಲಿದ್ದಾರೆ. 11 ವೇದಿಕೆಗಳಲ್ಲಿ 508 ಕಲಾ ತಂಡಗಳ ಕಲಾವಿದರು ಟೌನ್ ಹಾಲ್ ನಲ್ಲಿ ನಾಟಕ ಪ್ರದರ್ಶನ ನೀಡಲಿದ್ದಾರೆ. ಅಕ್ಟೋಬರ್ 5ರಂದು ಪ್ರಭುತ್ವ ಮತ್ತು ಸಂವಿಧಾನ ಆಶಯದಲ್ಲಿ ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ.

ಮೊದಲ ದಿನ ದಸರಾದ ಕಾರ್ಯಕ್ರಮಗಳ ವಿವರ

ದಸರಾ ಚಲನಚಿತ್ರೋತ್ಸವ ಉದ್ಘಾಟ ನೆ

ದಸರಾ ನಿಮಿತ್ತ ಇಂದು ಬೆಳಗ್ಗೆ 11:30 ಗಂಟೆಗೆ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿನ ಘಟಿಕೋತ್ಸವ ಭವನದಲ್ಲಿ ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.

ದಸರಾ ಆಹಾರ ಮೇಳ ಉದ್ಘಾಟನೆ

ಮಧ್ಯಾಹ್ನ 11:30 ಗಂಟೆಗೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಾಹರಗಳ ಸಚಿವ ಕೆ.ಎಚ್. ಮುನಿಯಪ್ಪ ಉದ್ಘಾಟಿಸಲಿದ್ದಾರೆ

ಫಲಪುಷ್ಪ ಪ್ರದರ್ಶನ ಉದ್ಘಾಟನೆ

 ಮಧ್ಯಾಹ್ನ 12:30 ಗಂಟೆಗೆ ನಗರದ ಕುಪ್ಪಣ್ಣ ಪಾರ್ಕ್ (ನಿಶಾದ್ ಬಾಗ್) ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಕೂಡ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.

ದಸರಾ ಕುಸ್ತಿ ಉದ್ಘಾಟನೆ

ಸಂಜೆ 04 ಗಂಟೆಗೆನಗರದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಅವರಣದಲ್ಲಿನ ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ “ದಸರಾ ಕುಸ್ತಿ ಪಂದ್ಯಾವಳಿ” ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ.

ದಸರಾ ಶಿಲ್ಪಕಲೆ ಮತ್ತು ಚಿತ್ರಕಲಾ ಶಿಬಿರ ಉದ್ಘಾಟನೆ

ಸಂಜೆ 4 ಗಂಟೆಗೆ ಸಿದ್ಧಾರ್ಥ ನಗರದಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ “ರಾಜ್ಯಮಟ್ಟದ ಶಿಲ್ಪಕಲೆ ಮತ್ತು ಚಿತ್ರಕಲಾ ಶಿಬಿರ”ದಲ್ಲಿ ರಚಿಸಲಾದ ಕಲಾ ಕೃತಿಗಳ ಪ್ರದರ್ಶನ, ಲಲಿತ ಕಲೆ, ಕರಕುಶಲ ಕಲೆಗಳ ಕಲಾಕೃತಿ ಪ್ರದರ್ಶನ ಮತ್ತು ರಾಷ್ಟ್ರಮಟ್ಟದ ಕರಕುಶಲ ಕಲೆಗಳ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್​ ತಂಗಡಗಿ ಅವರು ಉದ್ಘಾಟಿಸಲಿದ್ದಾರೆ.

ದಸರಾ ಸಿಎಂ ಕಪ್‌ ಕ್ರೀಡಾಕೂಟಕ್ಕೆ ಚಾಲನೆ

ಸಂಜೆ 4:30 ಗಂಟೆಗೆ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮವನ್ನು ಸಿಎಂ ಉದ್ಘಾಟಿಸಲಿದ್ದಾರೆ.

ದಸರಾ ಪುಸ್ತಕ ಮೇಳ ಉದ್ಘಾಟನೆ

ಸಂಜೆ 5 ಗಂಟೆಗೆ ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಪುಸ್ತಕ ಮೇಳ ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಉದ್ಘಾಟಿಸಲಿದ್ದಾರೆ.

ದಸರಾ ನವರಾತ್ರಿ ಜಾನಪದ ರಂಗ ಉತ್ಸವ ಉದ್ಘಾಟನೆ

ಸಂಜೆ 5:30 ಗಂಟೆಗೆ ನಗರದ ಕಲಾಮಂದಿರದಲ್ಲಿನ ರಂಗಾಯಣದ ಭೂಮಿಗೀತದ ರಂಗ ಮಂದಿರದಲ್ಲಿ “ನವರಾತ್ರಿ ಜಾನಪದ ರಂಗ ಉತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮವನ್ನು ಸಹ ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಲಿದ್ದಾರೆ.

ಸಾಂಸ್ಕೃತಿಕಾ ಕಾರ್ಯಕ್ರಮ ಉದ್ಘಾಟನೆ: ಸಂಜೆ 6 ಗಂಟೆಗೆ ಅರಮನೆಯ ಆವರಣದಲ್ಲಿ ನಾಡಹಬ್ಬ ಪ್ರಯುಕ್ತ ದಸರಾ ಸಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್​​ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ.

ದಸರಾ ದೀಪಾಲಂಕಾರಕ್ಕೆ ಚಾಲನೆ

ಸಂಜೆ 6.30ಕ್ಕೆ ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಹಸಿರು ಮಂಟಪದ ಬಳಿ ವಿದ್ಯುತ್ ದೀಪಾಲಂಕಾರ ಹಾಗೂ ದೀಪಾಲಂಕಾರಗೊಂಡಿರುವ ವಿದ್ಯುತ್ ರಥದ ಚಾಲನೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಇಂಧನ ಸಚಿವ ಕೆ.ಜೆ. ಜಾರ್ಜ್ ಉದ್ಘಾಟಿಸಲಿದ್ದಾರೆ.

ವಸ್ತು ಪ್ರದರ್ಶನ ಉದ್ಘಾಟನೆ

ರಾತ್ರಿ 7.30ಕ್ಕೆ ನಗರದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆಯೋಜಿಸಲಾಗಿರುವ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

World famous 'Mysuru Dasara' celebrations from today: Here's the details of the first day's events Mysore Dasara 2024 ಇಂದಿನಿಂದ ನಾಡಹಬ್ಬ `ಮೈಸೂರು ದಸರಾ’ ಮಹೋತ್ಸವ : ಮೊದಲ ದಿನದ ಕಾರ್ಯಕ್ರಮಗಳ ವಿವರ ಹೀಗಿದೆ..| Mysore Dasara 2024
Share. Facebook Twitter LinkedIn WhatsApp Email

Related Posts

BREAKING : ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

15/04/2026 11:10 AM1 Min Read

ಬೆಂಗಳೂರಿನಲ್ಲಿ ಭಾರೀ ಬಿಸಿಲು, ಇಂದು ತಾಪಮಾನ 37°C ದಾಟುವ ಸಾಧ್ಯತೆ : IMD ಎಚ್ಚರಿಕೆ

15/04/2026 11:01 AM2 Mins Read

BIG NEWS : ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಕೇಸ್ : ಇಂದು ಶಾಸಕ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ!

15/04/2026 10:50 AM1 Min Read
Recent News

BREAKING: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ

15/04/2026 11:19 AM

BREAKING : ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

15/04/2026 11:10 AM

ಬೆಂಗಳೂರಿನಲ್ಲಿ ಭಾರೀ ಬಿಸಿಲು, ಇಂದು ತಾಪಮಾನ 37°C ದಾಟುವ ಸಾಧ್ಯತೆ : IMD ಎಚ್ಚರಿಕೆ

15/04/2026 11:01 AM

BREAKING : ಬಿಹಾರದ ನೂತನ `CM’ ಆಗಿ `ಸಾಮ್ರಾಟ್ ಚೌಧರಿ’ ಪ್ರಮಾಣ ವಚನ ಸ್ವೀಕಾರ | WATCH VIDEO

15/04/2026 11:00 AM
State News
KARNATAKA

BREAKING : ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

By kannadanewsnow0515/04/2026 11:10 AM KARNATAKA 1 Min Read

ಮಂಡ್ಯ : ಮಂಡ್ಯದ ಆದಿಚುಂಚನ ಗಿರಿಯ ಮಠಕ್ಕೆ ಬೇಟಿ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾಲಭೈರವೇಶ್ವರನಿಗೆ ವಿಶೇಷವಾದ ಪೂಜೆ…

ಬೆಂಗಳೂರಿನಲ್ಲಿ ಭಾರೀ ಬಿಸಿಲು, ಇಂದು ತಾಪಮಾನ 37°C ದಾಟುವ ಸಾಧ್ಯತೆ : IMD ಎಚ್ಚರಿಕೆ

15/04/2026 11:01 AM

BIG NEWS : ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಕೇಸ್ : ಇಂದು ಶಾಸಕ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ!

15/04/2026 10:50 AM

BREAKING : ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು : ಗುಂಡು ಹಾರಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿಯ ಭೀಕರ ಹತ್ಯೆ!

15/04/2026 10:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.