ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ದೂರುದಾರ ಸ್ನೇಹಮಯಿ ಕೃಷ್ಣ ಹಾಜರಾಗಿದ್ದಾರೆ.
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಇಡಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಇಸಿಐಆರ್ ಕೂಡ ದಾಖಲಿಸಲಾಗಿತ್ತು. ಈ ಪ್ರಕರಣ ಸಂಬಂಧ ಸೂಕ್ತ ದಾಖಲೆಗಳನ್ನು ಸಲ್ಲಿಸುವಂತೆ, ವಿಚಾರಣೆಗೆ ಹಾಜರಾಗುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಇಡಿ ಸಮನ್ಸ್ ಜಾರಿಗೊಳಿಸಿದ್ದು, ಇಂದು ಸ್ನೇಹಮಯಿ ಕೃಷ್ಣ ಅವರು ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಂಗಳೂರಿನ ಶಾಂತಿನಗರದಲ್ಲಿರುವ ಜಾರಿ ನಿರ್ದೆಶನಾಲಯದ ಕಚೇರಿಯಲ್ಲಿ ತಮ್ಮ ದೂರಿಗೆ ಸಂಬಂಧಿಸಿದ ದಾಖಲೆಗಳೊಂದಿಗೆ ಸ್ನೇಹಮಯಿ ಕೃಷ್ಣ ವಿಚಾರಣೆಗೆ ಹಾಜರಾಗಿದ್ದಾರೆ.