ಮೈಸೂರು : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ರಾಜೀನಾಮೆ ಕೇಳಿದ್ರೆ ಕೊಡ್ತಾರಾ? ಸಿಎಂ ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಸ್ವಪಕ್ಷದವರ ವಿರುದ್ಧವೇ ಟಾಂಗ್ ಕೊಟ್ಟಿದ್ದಾರೆ.
ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಎಫ್ ಐಆರ್ ದಾಖಲಾದ ತಕ್ಷಣ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿಲ್ಲ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ರಾಜೀನಾಮೆ ಕೇಳಿದ್ರೆ ಕೊಡ್ತಾರಾ? ಸಿಎಂ ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು? ಎಂದು ಸ್ವಪಕ್ಷದವರ ವಿರುದ್ಧವೇ ಟಾಂಗ್ ಕೊಟ್ಟಿದ್ದಾರೆ.
ಬಿಜೆಪಿ-ಜೆಡಿಎಸ್ ನವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಯಾರ ಮೆಲೆ ಎಫ್ ಐಆರ್ ದಾಖಲಾಗಿದೆಯೋ ಅವರೆಲ್ಲ ವಿಧಾನಸೌಧದ ಬಳಿ ನಿಂತುಕೊಳ್ಳಿ. ಕೇಂದ್ರ ಸರ್ಕಾರದಿಂದ ಏನು ಯೋಜನೆ ತರಬೇಕು ಅದನ್ನು ಯೋಚಿಸಿ, ಸಿದ್ದರಾಮಯ್ಯ ಕಾಲದಲ್ಲಿ ಅಭಿವೃದ್ಧಿ ಆದಷ್ಟು ಯಾವತ್ತೂ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ.