ರಾಯಚೂರು : ಜೀವನದಲ್ಲಿ ಮಾನಸಿಕವಾಗಿ ನೊಂದಿದ್ದರಿಂದ ದೇವಸ್ಥಾನದ ಮಹಿಳಾ ಅರ್ಚಕಿಯೊಬ್ಬರು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಡೊಂಗರಾಂಪೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬೆಟ್ಟದ ಪರಮೇಶ್ವರ ದೇವಸ್ಥಾನದಲ್ಲಿ ಅರ್ಚಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಂಜುಳಾ (42) ಎನ್ನುವವರು ಒಂಟಿಯಾಗಿ ವಾಸಿಸುತ್ತಿದ್ದರು. ಜೀವನದಲ್ಲಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತಂತೆ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.