ಬೆಂಗಳೂರು: ರಾಜ್ಯದಲ್ಲಿನ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಗ್ರಾಮ-ಒನ್, ಕರ್ನಾಟಕ-ಒನ್ ಮೂಲಕ ಸೇವಾ ಸಿಂಧು ವೆಬ್‍ಸೈಟ್ ಮೂಲಕ ಚಾಲಕರು, ಪೋಷಕರು ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆ ನೀಡಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ
2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು http://shp.karnataka.gov.in/bcwd ವೆಬ್‍ಸೈಟ್ ಮೂಲಕ ಅಕ್ಟೋಬರ್ 30, 2024 ರೋಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8050770004, 8050770005 ಅಥವಾ https://bcwd.Karnataka.gov.in ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BREAKING: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಮಾಜಿ MLC ರಮೇಶ್ ಗೌಡ ವಿರುದ್ಧ FIR ದಾಖಲು