ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ದೂರುದಾರ ಸ್ನೇಹಮಯಿ ಕೃಷ್ಣ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಇಂದು ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆ 9ಗಂಟೆಗೆ ವಿಚಾರಣೆಗೆ ಹಾಜರಾಗಿ ಎಂದು ಸೂಚನೆ ನೀಡಿದ್ದಾರೆ.
ನಿನ್ನೆ ED ಅಧಿಕಾರಿಗಳು ಸ್ನೇಹಮಯಿ ಕೃಷ್ಣ ಅವರನ್ನು ವಿಚಾರಣೆ ನಡೆಸಿತ್ತು. ಅಧಿಕಾರಿಗಳು ಕೇಳಿರುವ ಎಲ್ಲ ದಾಖಲೆಗಳನ್ನು ನೀಡಿದ್ದೇನೆ ಎಂದು ವಿಚಾರಣೆಯ ಬಳಿಕ ತಿಳಿಸಿದ್ದರು. ಇದೀಗ ಇಂದು ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆ 9 ಗಂಟೆಗೆ ವಿಚಾರಣೆಗೆ ಕರೆದಿದ್ದಾರೆ ಎಂದು ತಿಳಿದುಬಂದಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದೂರುದಾರ ಸ್ನೇಹಮಯಿ ಕೃಷ್ಣಗೆ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ಅವರಿಗೆ ಇಡಿ ವಿಚಾರಣೆಗೆ ಹಾಜರಾಗಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಮುಡಾ ಹಗರಣ ಸಂಬಂಧ 500ಕ್ಕೂ ಹೆಚ್ಚು ದಾಖಲೆಗಳನ್ನು ಕೊಟ್ಟಿದ್ದೇನೆ. ನಾನು ನೀಡಿದ ದಾಖಲೆ ಸಂಬಂಧ ಇಡಿ ಅಧಿಕಾರಿಗಳು ನನಗೆ ಸ್ಪಷ್ಟನೆ ಕೇಳಿದ್ದರು.ಮುಡಾದಲ್ಲಿ ಸುಮಾರು 5000 ಕೋಟಿಗೂ ಹೆಚ್ಚು ಹಗರಣ ನಡೆದಿದೆ ಎಂದು ತಿಳಿಸಿದರು.
ಬೆಳಗ್ಗೆಯಿಂದ ಸಂಜೆವರೆಗೂ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಅಧಿಕಾರಿಗಳಿಗೆ ಯಾವ ಕ್ಲಾರಿಫಿಕೇಷನ್ ಬೇಕೋ ಅದೆಲ್ಲಾ ಕೊಟ್ಟಿದ್ದೀನಿ. ದಾಖಲೆ, ಸಾಕ್ಷಿಗಳ ಬಗ್ಗೆ ಮಾಹಿತಿ ಕೇಳಿದ್ರು, ಅದೆಲ್ಲವನ್ನೂ ಕೊಟ್ಟಿದ್ದೇನೆ. ಇಡಿ ಅಧಿಕಾರಿಗಳು ಮತ್ತೆ ಕರೆದರೆ ವಿಚಾರಣೆಗೆ ಬರುವೆ ಎಂದು ಹೇಳಿದ್ದಾರೆ. ಮುಡಾ ಹಗರಣ ಸಂಬಂಧ 500ಕ್ಕೂ ಹೆಚ್ಚು ದಾಖಲೆಗಳನ್ನು ಕೊಟ್ಟಿದ್ದೆ. ನಾನು ನೀಡಿದ್ದ ದಾಖಲೆ ಸಂಬಂಧ ಇಡಿ ಅಧಿಕಾರಿಗಳು ಸ್ಪಷ್ಟನೆ ಕೇಳಿದ್ದರು.
ಮುಡಾದಲ್ಲಿ ಸುಮಾರು 5 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ. ಕನ್ನಡದಲ್ಲಿರುವ ದಾಖಲೆಗಳ ಬಗ್ಗೆಯೂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆ. ಮುಡಾಗೆ ಸೈಟ್ ವಾಪಸ್ ನೀಡಿದರೆ ಅದು ಸಾಕ್ಷಿ ನಾಶ ಬರಲ್ಲ. ವಾಪಸ್ ಕೊಟ್ಟಿರೋದೇ ಸಾಕ್ಷಿ ಆಗುತ್ತೆ. ಮುಡಾದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ. ಹೀಗಾಗಿ ಇದಕ್ಕೆ ಮನಿ ಲ್ಯಾಂಡರಿಂಗ್ ಆ್ಯಕ್ಟ್ ಅನ್ವಯವಾಗುತ್ತೆ ಎಂದು ತಿಳಿಸಿದ್ದಾರೆ.