ರಾಯಚೂರು : ಮುಡಾ ಹಗರಣದ ಮಧ್ಯೆಯು ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅದಾದ ಬಳಿಕ ಇಂದಿನಿಂದ ಎರಡು ದಿನಗಳ ಕಾಲ ಅವರು ರಾಯಚೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದಾರೆ.
ಹೌದು ಇಂದಿನಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ರಾಯಚೂರು ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ರಾಯಚೂರು, ಸಿಂಧನೂರು, ಮಾನ್ವಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮೈಸೂರಿನಿಂದ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್ ಸ್ಟ್ರಿಪ್ ಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ.
ಬಳಿಕ ರಸ್ತೆ ಮೂಲಕ ಸಿಂಧನೂರಿಗೆ ತೆರಳಲಿದ್ದಾರೆ. ಮಧ್ಯಾಹ್ನ ಒಂದು 45ಕ್ಕೆ ರಾಯಚೂರು ಜಿಲ್ಲೆಯ ಸಿಂಧನೂರಿಗೆಸಿಎಂ ಆಗಮಿಸಲಿದ್ದು ಮಧ್ಯಾಹ್ನ 3 ಗಂಟೆಗೆ ಸಿಂಧನೂರು ದಸರಾ ಉತ್ಸವಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ. ಸಂಜೆ 6 ಗಂಟೆಗೆ ಕಲ್ಯಾಣ ಸೌಹಾರ್ದ ನಡೆ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ.
ಸಿಂಧನೂರು ಪಟ್ಟಣದ ಪದವಿ ಕಾಲೇಜು ಮೈದಾನದಲ್ಲಿ ಈ ಒಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ವೇಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. 1,635 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.