ಗುಜರಾತ್ : ಇತ್ತೀಚೆಗೆ ಕೊಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಭೀಕರವಾಗಿ ಕೊಲೆ ಮಾಡಿರುವಂತಹ ಘಟನೆ ಇಡೀ ದೇಶವೇ ಬೆಚ್ಚಿ ಬೀಳಿಸುವಂತಿತ್ತು. ಅದಾದ ದೇಶದ ಎಲ್ಲೆಡೆ ಮಹಿಳೆಯರ ಮೇಲೆ ಹಾಗೂ ಯುವತಿಯರ ಮೇಲೆ ಲೈಂಗಿಕ ಕಿರುಕುಳ ಹಾಗು ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇದೀಗ ಗುಜರಾತ್ ನಲ್ಲಿ ಸ್ವಂತ ಅಣ್ಣನೇ ತಂಗಿಯ ಮೇಲೆ ಅತ್ಯಾಚಾರ ಎಸಗಿರುವ ಹೀನ ಕೃತ್ಯ ನಡೆದಿದೆ.
ಆತ 16 ವರ್ಷದವನಾಗಿದ್ದು, ತಂಗಿಗಿನ್ನು 13 ವರ್ಷ ವಯಸ್ಸು, ಗುಜರಾತ್ನ ಸೂರತ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ಹೊಟ್ಟೆ ನೋವು ಎಂದು ಹೇಳಿದ ಬಳಿಕ ಆಕೆಯ ತಾಯಿ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ. ವೈದ್ಯರು ಆಕೆಗೆ ಮೂರು ತಿಂಗಳಾಗಿರುವುದನ್ನು ದೃಢಪಡಿಸಿದ್ದಾರೆ.
ಘಟನೆ ಬಳಿಕ ಬಾಲಕಿಯ ತಾಯಿ ಸೆ.30ರಂದು ಬಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪೋಲೀಸರ ಪ್ರಕಾರ, ಪೋಷಕರು ಕೂಲಿ ಕೆಲಸ ಮಾಡುತ್ತಿದ್ದರು ಮತ್ತು ಕೆಲಸಕ್ಕಾಗಿ ಪ್ರತಿದಿನ ಬೆಳಗ್ಗೆ ಮನೆಯಿಂದ ಹೊರಡುತ್ತಿದ್ದರು ಮತ್ತು ಅವರ ಇಬ್ಬರೂ ಮಕ್ಕಳು ಮನೆಯಲ್ಲಿ ಇರುತ್ತಿದ್ದರು.
ವಿಚಾರಣೆ ವೇಳೆ ಬಾಲಕಿ ತನ್ನ ತಾಯಿಗೆ ತನ್ನ ಅಣ್ಣ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಕೇಳಿದ್ದಾಗಿ ತಿಳಿಸಿದ್ದಾಳೆ. ಬಾಲಕಿ ನಿರಾಕರಿಸಿದಾಗ ಆತ ಆಕೆಯ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿ, ಪೋಷಕರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ತಿಳಿಸಿದ್ದಾಳೆ.