ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಗಳಿಗೆ ಶಾಕ್ ನೀಡಿದ್ದು, ಇಂದು ಬೆಳಿಗ್ಗೆ ಏಕಾಏಕಿ ದೆಹಲಿಯ ಇಡಿ ಅಧಿಕಾರಿಗಳಿಂದ ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಗಳ ಮೇಲೆ ದಾಳಿ ನಡೆದಿದೆ.
ಹೌದು ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಗಳ ಮನೆಯ ಮೇಲೆ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದು, ಬೆಂಗಳೂರಿನ 5 ಕಡೆ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ದೆಹಲಿಯ ಇಡಿ ಅಧಿಕಾರಿಗಳ ತಂಡದಿಂದ ದಾಳಿ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಸಿಬ್ಬಂದಿಗಳ ಮನೆಯಲ್ಲಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ದಾಳಿಯ ಕುರಿತಂತೆ ಅಧಿಕಾರಿಗಳಿಂದ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.