ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು ಇಂದು ಮೈಸೂರಿನ ವಿಜಯನಗರದಲ್ಲಿರುವ, ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ 14 ಸೈಟ್ಗಳ ಸ್ಥಳ ಮಹಜರು ನಡೆಸಿದರು.
ಹೌದು ಕೆಸರೆ ಗ್ರಾಮದ ಜಮೀನಿನ ಬದಲಾಗಿ ಮೈಸೂರಿನ ವಿಜಯನಗರದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು ಈ ಒಂದು ಸೈಟ್ ಪಡೆದುಕೊಂಡಿದ್ದರು. ಮೈಸೂರಿನ ವಿಜಯನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಸ್ಥಳ ಮಹಜರು ಪ್ರಕ್ರಿಯೆ ನಡೆಯಿತು. ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಕರೆದುಕೊಂಡು ಲೋಕಾಯುಕ್ತ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೀಡಿದ್ದ ಸೈಟ್ ಗಳ ಮಹಜರು ನಡೆಸಲಾಗಿದೆ.
ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಇಡಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಿದ್ದರು. ಬಳಿಕ ಇಂದು ಲೋಕಾಯುಕ್ತ ಅಧಿಕಾರಿಗಳು ಸಹ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ಸೂಚಿಸಿದ್ದರು. ಹಾಗಾಗಿ ಅವರ ಸಮ್ಮುಖದಲ್ಲಿ ಮೈಸೂರಿನ ವಿಜಯನಗರದಲ್ಲಿರುವ 14 ಸೈಟ್ ಗಳ ಸ್ಥಳ ಮಹಜರು ನಡೆಸಲಾಯಿತು.