ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಾಂಪೌಂಡ್ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಆನೇಕಲ್ಲಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಈ ಒಂದು ಅವಘಡ ಸಂಭವಿಸಿದೆ.
ರಾಯಚೂರು ಜಿಲ್ಲೆಯ ದೇವದುರ್ಗ ಮೂಲದ ಪರಶುರಾಮ (24) ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಈ ವೇಳೆ ಮತ್ತೊಬ್ಬ ಕಾರ್ಮಿಕನಿಗೆ ಗಂಭೀರವಾದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಪೈಪ್ ಅಳವಡಿಕೆಗೆ ಮಣ್ಣು ಹಾಗೆ ಇರುವಾಗ ಕಾಂಪೌಂಡ್ ಕುಸಿದು ಬಿದ್ದಿದೆ.
ರಾಯಚೂರು ಮೂಲದ ಐದರಿಂದ ಆರು ಕಾರ್ಮಿಕರು ಕೆಲಸ ಮಾಡುತ್ತಿದ್ದರು.ಈ ವೇಳೆ ಏಕಾಏಕಿ ಕಾರ್ಮಿಕರ ಮೇಲೆ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.