ಬೆಂಗಳೂರು : ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡುವ ಬಗ್ಗೆ ಶಿಕ್ಷಣ ಇಲಾಖೆಯು ಮಹತ್ವದ ಆದೇಶ ಹೊರಡಿಸಿದ್ದು, ಕಡ್ಡಾಯವಾಗಿ ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ.
ಮೇಲ್ಕಾಣಿಸಿದ ವಿಷಯ ಹಾಗೂ ಉಲ್ಲೇಖಗಳಿಗೆ ಸಂಬಂಧಿಸಿದಂತೆ, ಹದಿಹರೆಯದಲ್ಲಿ ಮಕ್ಕಳು ತಂಬಾಕು ಅಥವಾ ಇತರೆ ಮಾದಕ ವಸ್ತುಗಳನ್ನು ಬಳಸುವುದರಿಂದ, ಶಾಲಾ-ಕಾಲೇಜು ಶಿಕ್ಷಣ ಮಟ್ಟದಲ್ಲಿ ಈ ಬಗ್ಗೆ ಅರಿವು ಮೂಡಿಸಲು ಹೆಚ್ಚಿನ ಆದ್ಯತೆ ನೀಡುವುದು ಅವಶ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ಸಾಕಷ್ಟು ಉಪಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಪ್ರಸ್ತುತ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ವಾರ್ಷಿಕವಾಗಿ ಜಿಲ್ಲೆಯಲ್ಲಿ 100 ಶಾಲಾ-ಕಾಲೇಜು ಅರಿವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಭಾರತ ಸರ್ಕಾರ 2017 ರಲ್ಲಿ ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆ (Tobacco Free Educational Institution) ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸದರಿ ಮಾರ್ಗಸೂಚಿಯನ್ನು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಅನುಷ್ಠಾನಗೊಳಿಸಲು ಸೂಚಿಸಿರುತ್ತದೆ.
(ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ ಮಾರ್ಗಸೂಚಿಯನ್ನು ಈ ಪತ್ರದೊಂದಿಗೆ ಅಡಕಗೊಳಿಸಿದೆ).
ಸದರಿ ಚಟುವಟಿಕೆಗಳ ಬಗ್ಗೆ ಇನ್ನಷ್ಟು ವೇಗ ಹಾಗೂ ಪರಿಣಾಮಕತ್ವವನ್ನು ತುಂಬಲು ಉಲ್ಲೇಖ(5) ರಂತೆ, ಶೈಕ್ಷಣಿಕ ಮೇಲ್ವಿಚಾರಣಾಧಿಕಾರಿಗಳಿಗೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯಿಂದ ದಿನಾಂಕ 21-08-2024 ರಂದು ಉಪಗ್ರಹ ಆಧಾರಿತ ತರಬೇತಿಯನ್ನು ನೀಡಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ, ಈ ಕೆಳಗಿನ ಕ್ರಮಗಳನ್ನು ಜಿಲ್ಲೆಗಳಲ್ಲಿ ಪರಿಣಾಮಕಾರಿ ಯಾಗಿ ಅನುಷ್ಠಾನ ಮಾಡಲು ಸೂಚಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯವು ಹೊರಡಿಸಿರುವ ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ” ಮಾರ್ಗಸೂಚಿಗಳನ್ನು ಪ್ರತಿ ಶಾಲೆಗಳಲ್ಲಿ ಡಿಸೆಂಬರ್ 2024 ರ ಒಳಗಾಗಿ ಪೂರ್ಣವಾಗಿ ಅನುಷ್ಠಾನಗೊಳಿಸಿ, ಶಾಲೆಗಳನ್ನು ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ’ಎಂದು ಘೋಷಿಸಿ,ಜಿಲ್ಲಾಮಟ್ಟದ ಕ್ರೋಢೀಕೃತ ವರದಿಯನ್ನು ಈ ಕೆಳಕಂಡ ನಮೂನೆಯಲ್ಲಿ DSERT ಕಛೇರಿಯ ntsenmms.dsertkar @gmail.comನಲ್ಲಿ ಡಿಸೆಂಬರ್ ಒಳಗೆ ಸಲ್ಲಿಸುವುದು.