ಬೆಂಗಳೂರು : ರಾಜ್ಯದಲ್ಲಿನ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಗ್ರಾಮ-ಒನ್, ಕರ್ನಾಟಕ-ಒನ್ ಮೂಲಕ ಸೇವಾ ಸಿಂಧು ವೆಬ್‍ಸೈಟ್ ಮೂಲಕ ಚಾಲಕರು, ಪೆÇೀಷಕರು ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆ ನೀಡಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾನಿಧಿ ಯೋಜನೆ ಸೌಲಭ್ಯಕ್ಕಾಗಿ ರಾಜ್ಯದಲ್ಲಿನ ಹಳದಿ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋ ಚಾಲಕರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಚಾಲಕರು, ಪೋಷಕರ ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆಯೊಂದಿಗೆ ವೆಬ್‌ಸೈಟ್ https://sevasindhu.karnataka.gov.in/Sevasindhu/Kannada ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.