ಬೆಂಗಳೂರು : ಡೆತ್ ನೋಟ್ ಬರೆದಿಟ್ಟು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ.
ವೈಟ್ ಫೀಲ್ಡ್ ನ ಪ್ರಶಾಂತ್ ಲೇಔಟ್ ನಲ್ಲಿ ಗೌತಮಿ ಎಂಬ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ನನ್ನ ದೇಹವನ್ನು ಪೋಸ್ಟ್ ಮಾರ್ಟಮ್ ಮಾಡಬೇಡಿ ಎಂದು ಆತ್ಮಹತ್ಯೆ ಮಾಡಿಕೊಂಡ ಯುವತಿ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.
ನನ್ನ ಆತ್ಮಹತ್ಯೆ ಬಗ್ಗೆ ತನಿಖೆ ಮಾಡಬೇಡಿ, ನನ್ನ ಮೃತದೇಹ ಕುಟುಂಬ್ಥರಿಗೆ ಹಸ್ತಾಂತರಿಸಿ ಎಂದು ಯುವತಿ ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾಳೆ. ಘಟನೆ ಸಂಬಂಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.