ಕೋಲ್ಕತ್ತಾ : ಕೋಲ್ಕತ್ತಾದ ವೈದ್ಯೆಯ ರೇಪ್ & ಮರ್ಡರ್ ಕೇಸ್ ಮಾಸುವ ಮುನ್ನವೇ ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ ಟ್ಯೂಷನ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ 4 ನೇ ತರಗತಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ.
ಕೃಪಾಖಾಲಿ ಗ್ರಾಮದ ಗಂಗಾ ನದಿಯ ದಡದಲ್ಲಿ ಇಂದು ಬೆಳಿಗ್ಗೆ ಬಾಲಕಿಯ ಶವ ಪತ್ತೆಯಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಪ್ರಾಥಮಿಕ ತನಿಖೆಯ ನಂತರ, ಆರೋಪಿಯನ್ನು ಬಂಧಿಸಲಾಗಿದ್ದು, ಬಾಲಕಿಯ ಶವವನ್ನು ನದಿಯ ದಡದಿಂದ ವಶಪಡಿಸಿಕೊಳ್ಳಲಾಗಿದೆ.
ರಾತ್ರಿ 9 ಗಂಟೆಗೆ ಬಾಲಕಿ ಕಾಣೆಯಾದ ಬಗ್ಗೆ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇಂದು ಬೆಳಗ್ಗೆ ಬಾಲಕಿಯ ಶವ ಗಂಗಾ ನದಿಯ ದಂಡೆಯ ಮೇಲೆ ಪತ್ತೆಯಾಗಿದ್ದು, ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಬರೂಯಿಪುರ ಪೊಲೀಸ್ ವರಿಷ್ಠಾಧಿಕಾರಿ ಪಲಾಶ್ ಧಾಲಿ ತಿಳಿಸಿದ್ದಾರೆ.