ಬೆಂಗಳೂರು : ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ನ ಎರಡನೇ ಮಾಡಿಯಿಂದ ಯುವತಿಯೊಬ್ಬಳು ಬಿದ್ದು ಮೃತಪಟ್ಟಿರುವ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಘಟನೆ ಕುರಿತಂತೆ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೌದು ಅಪಾರ್ಟ್ಮೆಂಟ್ ಒಂದರ 2 ನೇ ಮಹಡಿಯಿಂದ ಬಿದ್ದು ಯುವತಿ ಮೃತಪಟ್ಟಿದ್ದಾಳೆ. ಮೃತ ಯುವತಿಯನ್ನು ಆರ್ಟಿಓ ಜಂಟಿ ಆಯುಕ್ತೆ ಶೋಭಾ ಅವರ ಪುತ್ರಿ ಎಂದು ತಿಳಿದು ಬಂದಿದೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೋ? ಅಥವಾ ಯಾವ ಕಾರಣಕ್ಕೆ ಯುವತಿ ಅಪಾರ್ಟ್ಮೆಂಟ್ ಮೇಲಿಂದ ಜಿಗಿದಿದ್ದಾಳೆ ಏನುವುದು ತಿಳಿದುಬಂದಿಲ್ಲ. ಹಾಗಾಗಿ ಎಲ್ಲ ಆಯಾಮದಲ್ಲಿ ತನಿಖೆ ನಡೆಯುತ್ತಿದೆ.